ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಅವರು ಯಾರೂ ಸಹ ರಾಜೀನಾಮೆ ನೀಡುವುದಿಲ್ಲ. ಹೀಗಾಗಿ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಸುಭದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈತ್ರಿಯಾಗಿದ್ದೇವೆ. ಚುನಾವಣೆ ಸಿದ್ದತೆಗೆ ಸಿಎಂ ಕುಮಾರಸ್ವಾಮಿ ಎಲ್ಲಾ ಕಡೆ ಓಡಾಡುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಪಂಚಾಯತ್ ಚುನಾವಣೆ ಇದೆ. ಆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.
ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು, ಕಾಂಗ್ರೆಸ್ ಮುಂಖಡರು ಮಾಡಿಕೊಳ್ಳುತ್ತಾರೆ. ಜೆಡಿಎಸ್ ಚಿಕ್ಕ ಪಕ್ಷ. ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಆದರೆ ಸದ್ಯಕ್ಕಿಲ್ಲ. ನಮ್ಮ ಪ್ರಾದೇಶಿಕ ಪಕ್ಷ 1998 ರಲ್ಲಿ ಹಲವು ಕಾರ್ಯಕ್ರಮ ನೀಡಿದೆ. ಆಗ 16 ಲೋಕಸಭಾ ಸ್ಥಾನ ಗೆದ್ದಿದ್ದೆವು. ಆದರೆ ದುರ್ವೈವ ಈಗ 2 ಸ್ಥಾನ ಮಾತ್ರ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ನಾವು ಮುಸ್ಲಿಂ ವಿರೋಧಿ ಅಲ್ಲ
ನಾವು ಮುಸ್ಲಿಂ ವಿರೋಧಿ ಅಲ್ಲ. ಈ ರಾಷ್ಟ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ತಂದಿದ್ದು ಜನತಾದಳ. ರಾಜಕೀಯ ಮೀಸಲಾತಿ, ಹೆಣ್ಣು ಮಕ್ಕಳಿಗೆ ಮೀಸಲಾತಿ, ಮುಸ್ಲಿಂ ಬಾಂಧವರೆಲ್ಲರನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ನಮ್ಮದು ಜಾತಿ ಪಕ್ಷ ಅಂತ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ