ದೆಹಲಿ: ಅಯೋಧ್ಯೆ ಬಾಬ್ರಿ ಮಸೀದಿ ಮತ್ತು ರಾಮ ಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.
ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಉದಯ್ ಲಲಿತ್ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜ. 29ಕ್ಕೆ ಮುಂದೂಡಲಾಗಿದೆ. ಹೊಸ ಪೀಠವನ್ನು ರಚನೆ ಮಾಡಿ ಜನವರಿ 29ರಿಂದ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ತಿಳಿಸಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆಯೇ ಮುಸ್ಲಿಂ ಪಿಟೀಶನರ್ ಪರ ವಕೀಲರು ಪಂಚ ಸದಸ್ಯರ ಪೀಠ ರಚನೆ ಬಗ್ಗೆ ಪ್ರಶ್ನೆಯನ್ನು ಎತ್ತಿದರು. ಏಕೆಂದರೆ ಪಂಚ ಸದಸ್ಯರ ಪೀಠದಲ್ಲಿ ಇರುವ ಜಸ್ಟೀಸ್ ಯು ಯು ಲಲಿತ್ ಅವರು ಅಯೋಧ್ಯೆ ಬಾಬ್ರಿ ಮಸೀದ ಧ್ವಂಸ ಪ್ರಕರಣದಲ್ಲಿ ವಕೀಲರಾಗಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಲಾಯಿತು. ಈ ಆಕ್ಷೇಪಣೆ ಹಿನ್ನೆಲೆಯಲ್ಲಿ ಜಸ್ಟೀಸ್ ಉದಯ್ ಉಮೇಶ್ ಲಲಿತ್ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
ಹೀಗಾಗಿ ಹೊಸ ಪೀಠವನ್ನು ರಚನೆ ಮಾಡಿ ಜನವರಿ 29ರಿಂದ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ಅಯೋಧ್ಯೆ ವಿಚಾರಣೆಗಾಗಿ ಸಿಜೆಐ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್. ಎ. ಬೊಬ್ಡೆ, ಎನ್. ವಿ. ರಮಣ, ಉದಯ್ ಉಮೇಶ್ ಲಲಿತ್ ಹಾಗೂ ಡಿ. ವೈ. ಚಂದ್ರಚೂಡ್ ಅವರನ್ನ ಒಳಗೊಂಡ ಪೀಠವನ್ನ ಸುಪ್ರೀಂಕೋರ್ಟ್ ರಚನೆ ಮಾಡಿತ್ತು. ಇದೀಗ ಮುಂದಿನ ವಿಚಾರಣೆಯನ್ನ ಜನವರಿ 29ಕ್ಕೆ ಮುಂದೂಡಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ