ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯವನ್ನು ತುಂಬುವ ನಿಟ್ಟಿನಲ್ಲಿ ಕಳೆದ ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಎಸ್.ಎಸ್.ಎಲ್.ಸಿ ಕಾನ್ಫಿಡೆನ್ಸ್ ಟೆಸ್ಟ್-2019 ಜನವರಿ 20 ಆದಿತ್ಯವಾರ ರಾಜ್ಯದ ಎಲ್ಲಾ ಡಿವಿಷನ್ ಕೇಂದ್ರಗಳಲ್ಲಿ ನಡೆಯಲಿದೆ.
ಕಳೆದ ವರ್ಷದ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅವಲೋಕನ ನಡೆಸಿದಾಗ ಮಕ್ಕಳಲ್ಲಿ ಕಾನ್ಫಿಡೆನ್ಸ್ ಟೆಸ್ಟ್ ಬಗ್ಗೆ ಉತ್ತಮ ಅಭಿಪ್ರಾಯಗಳು ಬಂದಿರುವ ಹಿನ್ನಲೆಯಲ್ಲಿ ಈ ಸಾಲಿನಲ್ಲೂ ಅತ್ಯಂತ ಸುಸೂತ್ರವಾಗಿ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾನ್ಫಿಡೆನ್ಸ್ ಟೆಸ್ಟ್ ಆದಿತ್ಯವಾರ ಬೆಳಿಗ್ಗೆ 9:30 ಗಂಟೆಗೆ ಗಣಿತ ಹಾಗೂ ಮಧ್ಯಾಹ್ನ 1:30 ಗಂಟೆಗೆ ವಿಜ್ಞಾನ ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ.ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಹಾಜರಾಗಿ,ಕಾನ್ಫಿಡೆನ್ಸ್ ನ ಪ್ರಯೋಜನ ಪಡೆಯುವಂತೆ ಎಸ್ಸೆಸ್ಸೆಫ್ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ