ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಿಹಿ ಪಾನೀಯಗಳಿಗೆ ತೆರಿಗೆ ವಿಧಿಸಲಾಗುವುದು ಎಂದು ಹಣಕಾಸು ಸಚಿವ ಮುಹಮ್ಮದ್ ಅಲ್ ಜದ್ಆನ್ ಹೇಳಿದ್ದಾರೆ.ಈ ತೆರಿಗೆಯನ್ನು ವ್ಯಾಟ್ ನ ಹೊರತಾಗಿ ವಿಧಿಸಲಾಗುವುದು. ಪ್ರಸಕ್ತ ಪವರ್ ಡ್ರಿಂಕ್ಸ್ , ತಂಬಾಕು ಉತ್ಪನ್ನಗಳು ಮತ್ತು ಕೋಲಾ ಗಳಿಗೆ ಈ ವಿಶೇಷ ತೆರಿಗೆಯನ್ನು ವಿಧಿಸಲಾಗುತ್ತಿದೆ.
ಸೌದಿ ಅರೇಬಿಯಾ ಮತ್ತು ನೆರೆಯ ಗಲ್ಫ್ ದೇಶಗಳಿಗಲ್ಲಿಯೂ ಸಿಹಿ ಪಾನೀಯ ಮತ್ತು ವಿಶೇಷ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸಲಾಗುವುದು ಎಂದು ಸಚಿವರು ಹೇಳಿದರು. ಸ್ವಿಟ್ಜರ್ಲೆಂಡ್ನ ಲಾವೋಸ್ ನಲ್ಲಿನ ನಡೆದ ಆರ್ಥಿಕ ಶೃಂಗಸಭೆಯ ನಂತರ ಮಾಧ್ಯಮ ಸಂದರ್ಶನವೊಂದರಲ್ಲಿ ಸಚಿವರು ಈ ಮಾಹಿತಿ ನೀಡಿದರು. ತೆರಿಗೆಯ ಶೇಕಡಾವಾರು ಎಂಬುದು ತೀರ್ಮಾನವಾಗಿಲ್ಲ. ಈ ತೆರಿಗೆ ಜಾರಿಗೆ ತರುವ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುವುದು. ಹೊಸ ಉತ್ಪನ್ನಗಳಿಗೂ ತೆರಿಗೆ ವಿಸ್ತರಿಸಲು ಜಿಸಿಸಿ ನಾಯಕತ್ವವು ಕಳೆದ ಶೃಂಗ ಸಭೆಯಲ್ಲಿ ಅನುಮತಿ ನೀಡಿದ್ದವು. ಇತರ ಗಲ್ಫ್ ರಾಷ್ಟ್ರಗಳೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ