ನವದೆಹಲಿ: ಪಶ್ಚಿಮ ಬಂಗಾಳದ ಮಮತಾ ನೇತೃತ್ವದ ಸರ್ಕಾರ ಭಾನುವಾರದಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲು ನಿರಾಕರಿಸಿದೆ.
ಉತ್ತರ ಬಂಗಾಳದ ರಾಯ್ಗಂಜ್ ಮತ್ತು ಬಲೂರ್ಘಾಟ್ನಲ್ಲಿ ಇಂದು ಯೋಗಿ ಅವರು ಎರಡು ರ್ಯಾಲಿಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಹೆಲಿಕಾಪ್ಟರ್ ಇಳಿಯಲು ಅನುಮತಿ ನೀಡದಿರುವುದರಿಂದ ರ್ಯಾಲಿಯಲ್ಲಿ ಅವರು ಪಾಲ್ಗೊಳ್ಳುವ ಬಗ್ಗೆ ಅನಿಶ್ಚಿತತೆ ತಲೆದೋರಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ರ್ಯಾಲಿಗೆ ಪಶ್ಚಿಮ ಬಂಗಾಳ ಸರಕಾರ ಯಾವುದೇ ಪೂರ್ವ ಸೂಚನೆಯಿಲ್ಲದೆ ಅನುಮತಿ ನಿರಾಕರಿಸಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸಿಎಂ ಆದಿತ್ಯನಾಥ್ ಅವರ ಮಾಹಿತಿ ಕಾರ್ಯದರ್ಶಿ ಮೃತ್ಯುಂಜಯ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ‘ಉ.ಪ್ರ ಸಿಎಂ ಜನಪ್ರಿಯತೆ ಸಹಿಸಲಾರದೆ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಇಳಿಸಲು ಅನುಮತಿ ನಿರಾಕರಿಸಿದ್ದಾರೆ’ ಎಂದು ಕುಮಾರ್ ಹೇಳಿದ್ದಾರೆ.
😀