ಸದ್ದಿಲ್ಲದೇ ತೈಲ ಬೆಲೆಯನ್ನು ಏರಿಸಿದ ಕೇಂದ್ರ ಸರಕಾರ

ನವದೆಹಲಿ:- ದೇಶದ ಜನತೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಂತೆ,ಕೇಂದ್ರ ಸರ್ಕಾರವು ಸದ್ದಿಲ್ಲದೇ ತೈಲ ಬೆಲೆಯನ್ನು ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.

ಪೆಟ್ರೋಲ್ ಬೆಲೆ ಲೀಟರ್ ಗೆ 2.80ರೂ. ಡೀಸೆಲ್ ಬೆಲೆಯಲ್ಲಿ 4.30ರೂ ಅನ್ನು ಏರಿಕೆ ಮಾಡಲಾಗಿದೆ. ಗುಜರಾತ್ ಚುನಾವಣೆಯ ಬಳಿಕ ತೈಲ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಏರಿಕೆಯಾಗಿರುವುದು ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಗುಜರಾತ್ ಚುನಾವಣೆ ನಂತರದಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದ್ದು, ಪೆಟ್ರೋಲ್ ಬೆಲೆ ಏರಿಕೆಯಿಂದ ಪ್ರತಿ ಲೀ 80 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀ 65 ರ ಸಮೀಪ ತಲುಪಿದೆ. ಇದರಿಂದಾಗಿ ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ.

Leave a Reply

Your email address will not be published. Required fields are marked *

error: Content is protected !!