ಮಡಿಕೇರಿ : ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್ ಮಾರ್ಚ್ 1 ರಂದು ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಶುಂಠಿಕೊಪ್ಪದಲ್ಲಿ ಘೋಷಣೆ ಮಾಡಲಿದ್ದಾರೆ.
ಜಿಲ್ಲಾ ಮುಸ್ಲಿಂ ಜಮಾಅತ್ ನ ಪೂರ್ವಭಾವಿ ಸಭೆಯು ಇಂದು ಮಡಿಕೇರಿಯ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆಯಿತು.
ಸಭೆಯಲ್ಲಿ ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ನಾಯಿಬ್ ಖಾಝಿ ಹಾಗೂ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷ ಮಹ್ಮೂದ್ ಉಸ್ತಾದ್ ಎಡಪ್ಪಾಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಎಸ್.ಪಿ.ಹಂಝ ಸಖಾಫಿ ಉದ್ಘಾಟಿಸಿದರು.
ಕರ್ನಾಟಕ ರಾಜ್ಯ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸಂ ಅಬ್ದುಲ್ ರಶೀದ್ ಝೈನಿ ಮುನ್ನುಡಿ ಭಾಷಣ ಮಾಡಿದರು. ಕರ್ನಾಟಕ ಸುನ್ನೀ ಕೋರ್ಡಿನೇಶನ್ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಪಿ ಅಹ್ಮದ್ ಸಖಾಫಿ ಶುಭಾಶಿರ್ವದಿಸಿ, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು ವಿಷಯ ಮಂಡಿಸಿದರು.
ಸಭೆಯಲ್ಲಿ ಕೊಡಗು ಜಿಲ್ಲಾ ಎಸ್ ವೈ ಎಸ್ , ಎಸ್ಸೆಸ್ಸಫ್ ಹಾಗೂ ಸುನ್ನೀ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು.
ಎಸ್ಸೆಸ್ಸಫ್ ಮಾಜಿ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಸ್ವಾಗತಿಸಿ, ನಿಕಟಪೂರ್ವ ಅಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಧನ್ಯವಾದ ಸಲ್ಲಿಸಿದರು. ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಮಡಿಕೇರಿ ಕಾರ್ಯಕ್ರಮ ನಿರೂಪಿಸಿದರು.