ನವದೆಹಲಿ: ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಮಂಗಳವಾರ ರಾತ್ರಿ ಭಾರತಕ್ಕೆ ಬಂದಿದ್ದು, ಎರಡು ದಿನಗಳ ಪ್ರವಾಸದಲ್ಲಿರಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನನ್ನ ಅಣ್ಣನಂತೆ, ನಾವಿಬ್ಬರೂ ಸಹೋದರರು ಎಂದು ಸೌದಿ ಆರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಹೇಳಿದ್ದಾರೆ.
ಭಯೋತ್ಪಾದನೆ ವಿರುದ್ಧ ಗಟ್ಟಿ ಸಂದೇಶ ರವಾನಿಸುವುದು ಹಾಗೂ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿಗಾಗಿ ಹಲವು ಪಾಲುದಾರಿಕೆ ಒಪ್ಪಂದಗಳು ನಡೆಯುವ ಸಾಧ್ಯತೆಯಿದೆ.
ರಾಷ್ಟ್ರರಾಜಧಾನಿ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಲ್ಮಾನ್ ಅವರನ್ನು ಬರಮಾಡಿಕೊಂಡರು. ಸೌದಿ ದೊರೆಯನ್ನು ಸ್ವಾಗತಿಸಿದ ನಂತರ ಮೋದಿ ಫೋಟೊ ಸಹಿತ ಸಂದೇಶ ಟ್ವೀಟಿಸಿದ್ದಾರೆ. ಸೌದಿ ದೊರೆ ವಿಮಾನದಿಂದ ಇಳಿಯುತ್ತಿದ್ದಂತೆ ಪ್ರಧಾನಿ ಮೋದಿ ಎಂದಿನ ಶೈಲಿಯಲ್ಲಿ ಅಪ್ಪುಗೆಯೊಂದಿಗೆ ಸ್ವಾಗತಿಸಿದರು.
ಇದೇ ಮೊದಲ ಬಾರಿಗೆ ಸೌದಿ ದೊರೆ ಸಲ್ಮಾನ್ ಭಾರತ ಭೇಟಿ ನೀಡುತ್ತಿದ್ದು, ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಇದೊಂದು ಹೊಸ ಅಧ್ಯಾಯದ ಆರಂಭ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿಕೊಂಡಿದ್ದಾರೆ.
ಪಾಕಿಸ್ತಾನ ಭೇಟಿಯ ಮೂಲಕ ದಕ್ಷಿಣ ಏಷ್ಯಾ ಪ್ರವಾಸ ಆರಂಭಿಸಿದ ಸಲ್ಮಾನ್, ಭಾರತ ಪ್ರವಾಸದ ಬಳಿಕ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಪುಲ್ವಾಮಾದಲ್ಲಿ ನಡೆದ ದಾಳಿಯ ಬಳಿಕ ಭಾರತ–ಪಾಕಿಸ್ತಾನ ನಡುವೆ ಉದ್ಭವಿಸಿರುವ ಆತಂಕದ ವಾತಾವರಣ ಸಲ್ಮಾನ್ ಭೇಟಿಯಿಂದ ತಿಳಿಯಾಗಬಹುದು ಎಂದೂ ವಿಶ್ಲೇಷಿಸಲಾಗುತ್ತಿದೆ.
ಎಂಬಿಎಸ್ ಎಂದೇ ಕರೆಸಿಕೊಳ್ಳುವ ಸಲ್ಮಾನ್, ಪಾಕಿಸ್ತಾನದಲ್ಲಿ ₹1.42 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಸೇರಿ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದರು. ಪಾಕಿಸ್ತಾನದಿಂದ ಸೌದಿ ಅರೇಬಿಯಾಗೆ ಮರಳಿ ಕೆಲವು ಗಂಟೆ ಮನೆಯಲ್ಲಿ ಕಳೆದು, 3 ಸಾವಿರ ಕಿ.ಮೀ. ಪ್ರಯಾಣದ ಮೂಲಕ ಭಾರತಕ್ಕೆ ಬಂದಿದ್ದಾರೆ. ಬಂಡಾವಾಳ ಹೂಡಿಕೆ, ಪ್ರವಾಸ, ವಸತಿ ಹಾಗೂ ಪ್ರಸಾರಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳು ಐದು ಒಪ್ಪಂದಗಳನ್ನು ಮಾಡಿಕೊಳ್ಳಲಿವೆ.
ಎರಡೂ ದೇಶಗಳ ನಿಯೋಗದ ಸಭೆ ಬುಧವಾರ ಹೈದರಾಬಾದ್ ಹೌಸ್ ನಲ್ಲಿ ನಡೆಯುತ್ತಿದೆ. ಸೌದಿ ದೊರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಭೋಜನ ಕೂಟ ಏರ್ಪಡಿಸಿದ್ದಾರೆ. ಸೌದಿ ದೊರೆ ಭಾರತದಲ್ಲಿ ಹೂಡಿಕೆ ಸೇರಿದಂತೆ ಹಲವು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೇ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಬುಧವಾರ ರಾತ್ರಿ 11:50ಕ್ಕೆ ಸೌದಿ ದೊರೆ ಸಲ್ಮಾನ್ ಭಾರತದಿಂದ ಹೊರಡಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ