ಜಿದ್ದಾ: ಸೌದಿ ಅರೇಬಿಯಾದಲ್ಲಿ ಪ್ರಾಯೋಜಕತ್ವವನ್ನು ಸರಳಗೊಳಿಸಲಾಗುವುದು ಎಂದು ಕಾರ್ಮಿಕ ಸಚಿವ ಅಹ್ಮದ್ ಬಿನ್ ಸುಲೈಮಾನ್ ಅಲ್-ರಾಜಹಿ ಹೇಳಿದ್ದಾರೆ. ಸ್ಥಳೀಯ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಸಚಿವರು ಈ ಬಗ್ಗೆ ಮಾಹಿತಿ ನೀಡಿದರು.
ಸೌದಿ ಅರೇಬಿಯಾದ ಕಾರ್ಮಿಕ ಕಾನೂನುಗಳನ್ನು ಪರಿಷ್ಕರಿಸಿ ಆನ್ಲೈನ್ ಮೂಲಕ ಮಾಡುವುದರ ಭಾಗವಾಗಿ ವಿದೇಶಿ ನೌಕರರಿಗೆ ಸಂಬಂಧಿಸಿದ ಕೆಲವು ಕ್ರಮಗಳನ್ನು ಮಿತಗೊಳಿಸಲಾಗುತ್ತದೆ. ಪ್ರಾಯೋಜಕತ್ವ ವ್ಯವಸ್ಥೆ, ಮರು ಪ್ರವೇಶ ವೀಸಾ, ನಿರ್ಗಮನ ವೀಸಾ ಕಾರ್ಯವಿಧಾನಗಳನ್ನು ಸರಳಗೊಳಿಸಲಾಗುವುದು.
ಕಾರ್ಮಿಕ ಮಾರುಕಟ್ಟೆಗೆ ಉಪಯೋಗವಾಗುವಂತೆ ವಿದೇಶಿ ಕೆಲಸಗಾರರು ಸೇರಿದಂತೆ ಕಾರ್ಮಿಕರ ಕ್ರಮಗಳನ್ನು ಸರಳಗೊಳಿಸುವುದು ಅಗತ್ಯವಿದೆ ಎಂಬುದನ್ನು ಮನಗಂಡು ಈ ಕ್ರಮ ಎನ್ನಲಾಗಿದೆ.
ಕಾರ್ಮಿಕ ಮತ್ತು ಉದ್ಯೋಗದಾತರ ಸಂಬಂಧ ಪಾರದರ್ಶಕಗೊಳಿಸುವುದು. ಮತ್ತು ಒಪ್ಪಂದದ ನಿಬಂಧನೆಗಳನ್ನು ವಸ್ತುನಿಷ್ಠ ಗೊಳಿಸುವುದು ಉದ್ದೇಶವಾಗಿದ್ದು, ಉದ್ಯೋಗ ಒಪ್ಪಂದದ ಪರಿಷ್ಕೃತ ಆವೃತ್ತಿ ಎಂಟು ತಿಂಗಳಲ್ಲಿ ಜಾರಿಗೆ ಬರಲಿದೆ ಎಂದು ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ