janadhvani

Kannada Online News Paper

ವಾಷಿಂಗ್ಟನ್: ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ಏರ್ ಸ್ಟ್ರೈಕ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ಹುಷಾರ್ ಎಂದು ಅಮೆರಿಕ ಎಚ್ಚರಿಕೆ ಕೊಟ್ಟಿದೆ.

ಭಾರತದ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಉಗ್ರರ ಕ್ಯಾಂಪ್ ಗಳ ಮೇಲೆ ಮಾತ್ರ ದಾಳಿ ಮಾಡಿದೆ. ಪಾಕ್ ಸೇನೆ ಹಾಗೂ ಸಾರ್ವಜನಿಕರ ಮೇಲೆ ಯಾವುದೇ ದಾಳಿಗಳಾಗಿಲ್ಲ. ಹೀಗಾಗಿ ಭಾರತ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ನಿಮ್ಮ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಅಮೆರಿಕಾದ ಕಾರ್ಯದರ್ಶಿ ಮೈಕ್ ಪೊಂಪೆಯೊ ಎಚ್ಚರಿಸಿದೆ.

ಇದೇ ವೇಳೆ, ಭಯೋತ್ಪಾದನೆ ವಿರುದ್ಧ ಈಗಲಾದರೂ ಪರಿಣಾಮಕಾರಿ ಕ್ರಮ ಕೈಗೊಳ್ಳಿ ಅದು ನಿಮಗೆ ಒಳ್ಳೆಯದ್ದು. ಇಲ್ಲದಿದ್ದರೆ ಭವಿಷ್ಯದಲ್ಲಿ ಹೆಚ್ಚಿನ ಪರಿಣಾಮ ಹೆದರಿಸಬೇಕಾಗುತ್ತದೆ ಎಂದು ಹೇಳಿದೆ.
error: Content is protected !!
%d bloggers like this: