ಎನ್ ಡಿ ಎ ಮೈತ್ರಿ ಕೂಟದಿಂದ ಹೊರಬರಲು ಶಿವಸೇನೆ ನಿರ್ಧಾರ

ಮುಂಬರುವ ಲೋಕಸಭಾ ಚುನಾವಣೆ ಮತ್ತು 2019ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದಿಂದ ಹೊರಗುಳಿದು ಏಕಾಂಗಿಯಾಗಿ ಸ್ಪರ್ಧೆ ಮಾಡುವ ಕುರಿತು ಶಿವಸೇನೆ ಪಕ್ಷ ಮಂಗಳವಾರ ನಿರ್ಣಯ ಕೈಗೊಂಡಿದೆ.

ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅವಿರೋಧ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ ಬಳಿಕ ಮಾಧ್ಯಮಗಳೊಂದಿಗೆ ಈ ಬಗ್ಗೆ ಮಾತನಾಡಿದ ಪಕ್ಷದ ವಕ್ತಾರ ಸಂಜಯ್ ರಾವತ್ ಅವರು, 2019ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆವನ್ನು ನಾವು ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದರು. ಅಲ್ಲದೆ ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು ಕಳೆದ ಮೂರು ವರ್ಷಗಳಿಂದ ಬಿಜೆಪಿ ಪಕ್ಷ ಸಿದ್ಧಾಂತಗಳ ವಿರುದ್ಧವಾಗಿ ನಡೆಯುತ್ತಿದೆ. ಹೀಗಾಗಿ ಪಕ್ಷ ಏಕಾಂಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.
ಇದೇ ವೇಳೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡುವ ವಿಶ್ವಾಸವಿದ್ದು, 48 ಲೋಕಸಭಾ ಕ್ಷೇತ್ರಗಳಲ್ಲಿ ಶಿವಸೇನೆ ಕನಿಷ್ಟ 25 ಸ್ಥಾನಗಳನ್ನು ಗೆಲ್ಲಲಿದೆ. ಅಂತೆಯೇ 288 ವಿಧಾನಸಭಾ ಕ್ಷೇತ್ರಗಳ ಪೈಕಿ 125 ಸ್ಥಾನಗಳನ್ನು ಜಯಿಸಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಅಂತೆಯೇ ಪಕ್ಷದ ಆಂತರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಸ್ವತಂತ್ರವಾಗಿ ಚುನಾವಣೆ ಎದುರಿಸಲು ನಿರ್ಧರಿಸುವ ಕುರಿತು ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ರಾವತ್ ಹೇಳಿದ್ದರು.

One thought on “ಎನ್ ಡಿ ಎ ಮೈತ್ರಿ ಕೂಟದಿಂದ ಹೊರಬರಲು ಶಿವಸೇನೆ ನಿರ್ಧಾರ

Leave a Reply

Your email address will not be published. Required fields are marked *

error: Content is protected !!