janadhvani

Kannada Online News Paper

ಕಾವಳಕಟ್ಟೆ : ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ನೇತೃತ್ವದ ಅಲ್ ಖಾದಿಸ ಕಾಲೇಜ್ ಆಫ್ ಇಸ್ಲಾಮಿಕ್ ಸೈನ್ಸ್ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡಗಳ ಶಿಲಾನ್ಯಾಸವನ್ನು ಅಸ್ಸಯ್ಯಿದ್ ಆಟಕೋಯ ತಂಙಳ್ ಕುಂಬೋಳ್ ರವರು ನೆರವೇರಿಸಿದರು.

ಬಳಿಕ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಲ್ಪಿ ಕಾವಳಕಟ್ಟೆ ಹಝ್ರತ್ ಅಧ್ಯಕ್ಷತೆ ವಹಿಸಿದರು. ಸಂಸ್ಥೆಗೆ ಮೊದಲ ಬಾರಿ ಭೇಟಿ ನೀಡಿದ ಕುಂಬೋಳ್ ತಂಙಳ್ ರವರನ್ನು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಮಾತನಾಡಿದ ಸಯ್ಯಿದ್ ರವರು ಕಾವಳಕಟ್ಟೆ ಹಝ್ರತ್ ರವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಕಿರ್ ಹಾಜಿ ಹೈಸಂ, ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ, ಜನಾಬ್ ಇಸ್ಮಾಯಿಲ್ ಬಿ.ಸಿ ರೋಡ್, ಅಬ್ಬಾಸ್ ಹಾಜಿ ಮಂಗಳೂರು, ಅಬ್ದುಲ್ ಜಬ್ಬಾರ್ ಮದೀನ, ಮುತ್ತಲಿಬ್ ಮೂಡುಬಿದಿರೆ, ಅಬ್ದುಲ್ ರಶೀದ್ ಸಅದಿ ಹಾಗೂ ಇನ್ನಿತರ ಪ್ರಮುಖರು ಭಾಗವಹಿಸಿದರು.
ಹಾಫಿಲ್ ಸುಫ್ಯಾನ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು, ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರು ಸ್ವಾಗತಿಸಿ ವಂದಿಸಿದರು.

error: Content is protected !! Not allowed copy content from janadhvani.com