ರಾಜ್ಯದ ಆಡಳಿತಾತ್ಮಕ ವಿಷಯದಲ್ಲಿ ಚುನಾವಣಾ ಆಯೋಗ ಮೂಗು ತೂರಿಸಕೂಡದು – ಸಿದ್ಧರಾಮಯ್ಯ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದು, ಸರ್ಕಾರ ಕಾರ್ಯವೈಖರಿಯಲ್ಲಿ ಚುನಾವಣಾ ಆಯೋಗ ಮೂಗು ತೂರಿಸಬಾರದು ಎಂದು ಖಾರವಾಗಿ ನುಡಿದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಚುನಾವಣಾ ಆಯೋಗ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಿರುವುದರ ಬಗ್ಗೆ ನನಗೆ ಮಾಹಿತಿ ಇರಲಿಲ್ಲ.ರಾಜ್ಯದಲ್ಲಿ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಮತದಾರರು ಪಟ್ಟಿಯನ್ನು ಪರಿಷ್ಕರಣೆ ಮಾಡುವುದು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು. ಆದ್ದರಿಂದ ಜಿಲ್ಲಾಧಿಕಾರಿ ವರ್ಗಾವಣೆಯಲ್ಲಿ ಯಾವುದೇ ನಿಯಮಗಳು ಉಲ್ಲಂಘನೆಯಾಗಿಲ್ಲ. ಆಡಳಿತ ದೃಷ್ಟಿಯಿಂದ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮ ಸಮರ್ಥನೀಯ. ಚುನಾವಣಾ ಆಯೋಗ ರಾಜ್ಯದ ಕಾರ್ಯವೈಖರಿಯಲ್ಲಿ ಮೂಗು ತೂರಿಸಬಾರದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!