janadhvani

Kannada Online News Paper

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ: ಯಾವಾಗ ? ಎಲ್ಲೆಲ್ಲಿ ?

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ದಿನಾಂಕಗಳು ಮತ್ತು ತಯಾರಿ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್‌ ಕುಮಾರ್‌ ಮಾಹಿತಿ ನೀಡಿದರು.

ರಾಜ್ಯದ ಯಾವ್ಯಾವ ಕ್ಷೇತ್ರಗಳಲ್ಲಿ ಯಾವಾಗ ಮತದಾನ ನಡೆಯಲಿದೆ ಎಂಬ ಹಾಗೂ ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ.

ಏಪ್ರಿಲ್ 18ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ

ಏಪ್ರಿಲ್ 23ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

  • ಮಾರ್ಚ್‌ 28: ನಾಮಪತ್ರ ಸಲ್ಲಿಕೆ ಆರಂಭ

  • ಏಪ್ರಿಲ್ 4: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

  • ಏಪ್ರಿಲ್ 5: ನಾಮಪತ್ರ ಪರಿಶೀಲನೆ‌‌

  • ಏಪ್ರಿಲ್ 8: ನಾಮಪತ್ರ ಹಿಂಪಡೆಯಲು ಕೊನೆಯ ದಿನ

error: Content is protected !! Not allowed copy content from janadhvani.com