janadhvani

Kannada Online News Paper

ಈ ವರದಿಯ ಧ್ವನಿಯನ್ನು ಆಲಿಸಿ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ನಿಗದಿಯಾಗಿದ್ದ ಸಿಇಟಿ ಪರೀಕ್ಷೆಗಳು ಮುಂದೂಡಿಕೆಯಾಗಿದೆ. ಏಪ್ರಿಲ್ 23, 24 ಕ್ಕೆ ನಿಗದಿಯಾಗಿರುವ ಸಿಇಟಿ ಪರೀಕ್ಷೆ ಏಪ್ರಿಲ್ 29, 30ಕ್ಕೆ ಮುಂದೂಡಿಕೆಯಾಗಿದೆ.

ವೇಳಾಪಟ್ಟಿ ಮೊದಲಿನಂತೆ ಇರಲಿದ್ದು, ದಿನಾಂಕ ಮಾತ್ರ ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 29 ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಡೆದರೆ, ಏಪ್ರಿಲ್ 30 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 1 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

ಈ ಬಾರಿ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಏ. 18 ರಂದು ಮೊದಲ ಹಂತದ ಚುನಾವಣೆ ನಡೆದರೆ ಎರಡನೇ ಹಂತದ ಚುನಾವಣೆ ಏ.23 ರಂದು ನಡೆಯಲಿದೆ.

error: Content is protected !! Not allowed copy content from janadhvani.com