ನವದೆಹಲಿ: ಇಥಿಯೋಪಿಯಾದಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನಗೊಂಡು 157 ಜನರು ಮೃತಪಟ್ಟ ಪರಿಣಾಮ ಹಲವು ರಾಷ್ಟ್ರಗಳು ಬೋಯಿಂಗ್ ವಿಮಾನದ ಸುರಕ್ಷತೆಯ ಬಗ್ಗೆ ಪ್ರಶ್ನೆ ಮಾಡುತ್ತಿವೆ. ಭಾರತದ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಬೋಯಿಂಗ್, ಜೆಟ್ಏರ್ವೇಸ್ ಹಾಗೂ ಸ್ಪೈಸ್ಜೆಟ್ ಸಂಸ್ಥೆಗಳಿಂದ ಮಾಹಿತಿ ಕೇಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ನಾಲ್ವರು ಸೇರಿ ಹಲವು ರಾಷ್ಟ್ರಗಳ 149 ಪ್ರಯಾಣಿಕರು ಹಾಗೂ ಎಂಟು ಮಂದಿ ವಿಮಾನ ಸಂಸ್ಥೆ ಸಿಬ್ಬಂದಿ ಭಾನುವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಇಥಿಯೋಪಿಯಾ ಏರ್ಲೈನ್ಸ್ನ ಬೋಯಿಂಗ್ 737 ಆಡಿಸ್ ಅಬಬಾದಿಂದ ಕೀನ್ಯಾದ ನೈರೋಬಿಯಾಗೆ ಪ್ರಯಾಣ ಆರಂಭಿಸಿದ ಕೆಲ ಸಮಯದಲ್ಲಿಯೇ ಪತಗೊಂಡಿತು.
ದೇಶದ ವಿಮಾನಯಾನ ಸಂಸ್ಥೆಗಳಾದ ಜೆಟ್ಏರ್ವೇಸ್ ಹಾಗೂ ಸ್ಪೈಸ್ಜೆಟ್ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳನ್ನು ಬಳಸುತ್ತಿದ್ದು, ಪ್ರಯಾಣಿಕರ ಸುರಕ್ಷತೆಯ ಕಾರಣಗಳಿಂದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಂಸ್ಥೆಗಳಿಂದ ಮಾಹಿತಿ ಪಡೆಯಲಿದೆ. ಈ ಕುರಿತು ವಿಮಾನ ನಿರ್ಮಾಣ ಸಂಸ್ಥೆ ಬೋಯಿಂಗ್ನ್ನೂ ಸಂಪರ್ಕಿಸಲಾಗುತ್ತದೆ ಎನ್ನಲಾಗಿದೆ.
ಇಥೋಪಿಯನ್ ಏರ್ಲೈನ್ಸ್ ’ಬೋಯಿಂಗ್ 737 ಮ್ಯಾಕ್ಸ್ 8’ ವಿಮಾನಗಳ ಹಾರಾಟವನ್ನು ಸ್ಥಗಿತ ಪಡಿಸಿರುವುದಾಗಿ ಸೋಮವಾರ ಹೇಳಿದೆ. ವಿಮಾನ ಪತನ ಸಂಭವಿಸಿದ ನಂತರದಲ್ಲಿ ಏರ್ಲೈನ್ಸ್ ಬಿ–737–8 ಮ್ಯಾಕ್ಸ್ ವಿಮಾನಗಳ ಹಾರಾಟ ಸ್ಥಗಿತಗೊಳಿಸುವ ನಿರ್ಧಾರ ಪ್ರಕಟಿಸಿದ್ದು, ಮುಂದಿನ ಸೂಚನೆಯ ವರೆಗೂ ಆ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದಿದೆ.
ಚೀನಾ ಸರ್ಕಾರ ದೇಶದ ವಿಮಾನಯಾನ ಸಂಸ್ಥೆಗಳಿಗೆ ಬಿ–737–8 ಮ್ಯಾಕ್ಸ್ ವಿಮಾನಗಳ ಹಾರಾಟ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಇಂಡೋನೇಷ್ಯಾದ ಲಯನ್ ಏರ್ ಸಂಸ್ಥೆಯ ಬಿ–737 ಮ್ಯಾಕ್ಸ್ ವಿಮಾನವು ಪತನಗೊಂಡಿತ್ತು. ಜಕಾರ್ತಾದಿಂದ ಹೊರಟಿದ್ದ ವಿಮಾನವು ಪತನಗೊಂಡು ಪ್ರಯಾಣಿಸುತ್ತಿದ್ದ ಎಲ್ಲ 189 ಜನರೂ ಸಾವಿಗೀಡಾದರು.
ಈವರೆಗೆ ಬೋಯಿಂಗ್ ಸಂಸ್ಥೆ 350ಕ್ಕೂ ಹೆಚ್ಚು ಬಿ–737 ಮ್ಯಾಕ್ಸ್ ವಿಮಾನಗಳನ್ನು ಹಲವು ರಾಷ್ಟ್ರಗಳ ವಿಮಾನಯಾನ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಜಗತ್ತಿನಾದ್ಯಂತ 2017ರಿಂದ ಇದೇ ಮಾದರಿಯ ಸುಮಾರು 5000 ವಿಮಾನಗಳಿಗಾಗಿ ಬೇಡಿಕೆ ಇದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ