janadhvani

Kannada Online News Paper

2019ರ ನಂತರ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ -ಸಾಕ್ಷಿ ಮಹಾರಾಜ್‌

ಉನ್ನಾವೋ(ಮಾ.16): ವಿವಾದಾತ್ಮಕ ಹೇಳಿಕೆಗಳ ಸರದಾರ, ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌,  2019ರ ಲೋಕಸಭೆ ಚುನಾವಣೆ ನಂತರ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಲೆ ಎಷ್ಟು ತೀವ್ರವಾಗಿದೆ ಎಂದರೆ, 2019ರ ಬಳಿಕ ಚುನಾವಣೆಯ ಅಗತ್ಯವೇ ಇರುವುದಿಲ್ಲ. 2024ರಲ್ಲಿ ಲೋಕಸಭೆ ಚುನಾವಣೆ ನಡೆಯುವುದಿಲ್ಲ ಎಂದು ಸಾಕ್ಷಿ ಮಹಾರಾಜ್ ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಇದೇ ಏಪ್ರಿಲ್ 11ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭೆಗೆ ದೇಶಾದ್ಯಂತ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23ರಂದು ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಮೇ 23 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಣೆಯಾಗಲಿದೆ.

error: Content is protected !! Not allowed copy content from janadhvani.com