janadhvani

Kannada Online News Paper

ಕಲ್ಲಡ್ಕ: ಝಮಾನ್ ಬೋಯ್ಸ್ ವತಿಯಿಂದ ಮಾ. 24 ರಂದು ಬೃಹತ್ ರಕ್ತದಾನ ಶಿಬಿರ

ಕಲ್ಲಡ್ಕ: ಝಮಾನ್ ಬೋಯ್ಸ್ ಕಲಡ್ಕ (ರಿ) ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ಮಾರ್ಚ್ 24 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರ ವರೆಗೆ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ.

ಯುವಶಕ್ತಿ ಸಂಘಟಿತರಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿರುವುದು ಪ್ರಸ್ತುತ ಸಮಾಜದಲ್ಲಿನ ಒಂದು ಮಹತ್ತರ ಬದಲಾವಣೆಯಾಗಿದೆ,ಇದಕ್ಕೆ ಪೂರಕವಾಗಿ ರಕ್ತದಾನ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಊರ ಪರವೂರ ಅನೇಕ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ ಮತ್ತು ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ವಿನಂತಿಸಿದ್ದಾರೆ.

ವರದಿ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಪತ್ರಿಕಾ ವಿಭಾಗ

error: Content is protected !! Not allowed copy content from janadhvani.com