janadhvani

Kannada Online News Paper

ಏಪ್ರಿಲ್ ಕೊನೇ ವಾರದಲ್ಲಿ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ-ಪಿ.ಸಿ.ಜಾಫರ್

ಬೆಂಗಳೂರು: ಏಪ್ರಿಲ್ ಮೂರನೇ ವಾರದಲ್ಲಿ ಪಿಯುಸಿ ಮತ್ತು ನಾಲ್ಕನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಘೋಷಣೆ ಮಾಡುವ ಆಲೋಚನೆ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ. ಜಾಫರ್ ತಿಳಿಸಿದರು.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾರ್, ಮಾ.2ದದ5ರಿಂದ ದ್ವಿತೀಯ ಪಿಯುಸಿ ಮತ್ತು ಏ.10ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಆರಂಭಿಸಲಾಗುತ್ತದೆ. ಮಾ.21ರಿಂದ ಪಿಯು ಉತ್ತರ ಪತ್ರಿಕೆಗಳ ಕೋಡಿಂಗ್ ಮತ್ತು ಡಿ ಕೋಡಿಂಗ್ ಪ್ರಕ್ರಿಯೆ ಆರಂಭಗೊಳ್ಳಲಿದೆ. 25ರಿಂದ ಮೌಲ್ಯಮಾಪನ ಆರಂಭಗೊಳ್ಳಲಿದೆ. ಅದೇ ರೀತಿ ಏ.10ರಿಂದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಪ್ರಾರಂಭಿಸಲಾಗುತ್ತದೆ.

ರಾಜ್ಯದಲ್ಲಿ ಏ.18 ಮತ್ತು ಏ.23ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುವುದರಿಂದ ಸಮಯ ಹೊಂದಾಣಿಕೆ ಮಾಡಿಕೊಂಡು ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಾಗುತ್ತದೆ. ಏಪ್ರಿಲ್ ಅಂತ್ಯಕ್ಕೆ ಮೊದಲು ಪಿಯುಸಿ ಆನಂತರ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

ಉಪನ್ಯಾಸಕರ ಪ್ರತಿಭಟನೆ: ಪಿಯು ಉಪನ್ಯಾಸಕರ ಸಂಘಕ್ಕೆ ಮೌಲ್ಯಮಾಪನ ಮಾಡುವಂತೆ ಮನವಿ ಮಾಡಲಾಗುವುದು. ಒಂದು ವೇಳೆ ಒಪ್ಪಿಕೊಳ್ಳದಿದ್ದರೆ, ಮೌಲ್ಯಮಾಪನ ಮಾಡಿಸುವುದಕ್ಕಾಗಿ ಈಗಾಗಲೇ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪಾಲಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಪ್ರತಿ ವರ್ಷದಂತೆ ಈ ವರ್ಷವೂ ಸುಸೂತ್ರವಾಗಿ ಮೌಲ್ಯಮಾಪನ ನಡೆಯಲಿದೆ ಎಂದು ಹೇಳಿದರು.

ಮೇ 6ರಿಂದ ತರಗತಿ: ದ್ವಿತೀಯ ಪಿಯುಸಿ ತರಗತಿಗಳು ಮೇ 6ರಿಂದ ಆರಂಭಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ವರ್ಷ ಕೂಡ ಮೇ 2ರಿಂದ ತರಗತಿಗಳನ್ನು ಆರಂಭಿಸಿದ ಪರಿಣಾಮವನ್ನು ಫಲಿತಾಂಶ ಬಂದ ಬಳಿಕ ತಿಳಿಯಲಿದೆ. ಹೀಗಾಗಿ, ಈ ವರ್ಷ ಕೂಡ ಮೇ 6ರಿಂದ ತರಗತಿಗಳು ಆರಂಭಗೊಳ್ಳಲಿವೆ. ಪಿಯು ಇಲಾಖೆಯನ್ನು ರಜೆ ರಹಿತ ಇಲಾಖೆಯನ್ನಾಗಿ ಘೋಷಿಸುವುದಕ್ಕೆ ಸರ್ಕಾರದ ಹಂತದಲ್ಲಿ ನಿರ್ಣಯ ಕೈಗೊಳ್ಳಬೇಕಿದೆ ಎಂದರು.

ಡಿಬಾರ್ ಸಂಖ್ಯೆ ಏರಿಕೆ: ಪರೀಕ್ಷಾ ಮೇಲ್ವಿಚಾರಕರ ಕಣ್ಣತ್ತಪ್ಪಿಸಿ ನಕಲು ಮಾಡೋ ವಿದ್ಯಾರ್ಥಿಗಳ ಸಂಖ್ಯೆ ಈ ವರ್ಷ ತುಸು ಏರಿಕೆಯಾಗಿದೆ. 2019ರಲ್ಲಿ 32 ವಿದ್ಯಾರ್ಥಿಗಳು ದೂರಾಚಾರದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. 2018ರಲ್ಲಿ ಇದರ ಸಂಖ್ಯೆ 15 ಇತ್ತು. ಆದರೆ, ಕಳೆದ ಐದು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರತಿ ವರ್ಷ ನಕಲು ಮಾಡಿ ಸಿಕ್ಕಿ ಬೀಳುವ ವಿದ್ಯಾರ್ಥಿಗಳ ಸಂಖ್ಯೆ ತುಸು ಕಡಿಮೆಯಾಗುತ್ತಿದೆ. 2013 ಇದರ ಸಂಖ್ಯೆ 195 ಇತ್ತು.

error: Content is protected !! Not allowed copy content from janadhvani.com