4 ರಾಜ್ಯಗಳ ಮಲ್ಟಿಫ್ಲೆಕ್ಸ್ ಗಳಲ್ಲಿ ಪದ್ಮಾವತ್ ಗೆ ಪ್ರದರ್ಶನ ಭಾಗ್ಯ ಇಲ್ಲ

ರಾಜಸ್ಥಾನ, ಮದ್ಯಪ್ರದೇಶ, ಗೋವಾ, ಮಹಾರಾಷ್ಟ್ರಗಳಲ್ಲಿ ಯಾವ ಮಲ್ಟಿಫ್ಲೆಕ್ಸ್ ಗಳಲ್ಲಿಯೂ ಪದ್ಮಾವತ್ ಚಿತ್ರ ಪ್ರದರ್ಶನಗೊಳ್ಳುವುದಿಲ್ಲ ಎಂದು ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹೇಳಿದೆ.
“ಆಯಾ ರಾಜ್ಯಗಳ ಕಾನೂನು ಸುವ್ಯವಸ್ಥೆಗೆ ಧಕ್ಕೆಯೊದಗುವ ಸಂಭವವಿರುವ ಹಿನ್ನೆಲೆಯಲ್ಲಿ ಗೋವಾ, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ರಾಜಸ್ಥಾನದ ಮಾಲ್ ಗಳಲ್ಲಿ ಪದ್ಮಾವತ್ ಪ್ರದರ್ಶನ ಮಾಡದಿರಲು ನಾವು ನಿರ್ಧರಿಸಿದ್ದೇವೆ” ಎಂದು ಅಸೋಸಿಯೇಷನ್ ಪಿಟಿಐ ಗೆ ತಿಳಿಸಿದೆ.
ಗುಜರಾತ್ ನಲ್ಲಿ ಸಹ ಯಾವ ಮಲ್ಟಿಫ್ಲೆಕ್ಸ್ ನಲ್ಲಿಯೂ , ಇತರೆ ಚಿತ್ರಮಂದಿರಗಳಲ್ಲಿಯೂ ಪದ್ಮಾವತ್ ಪ್ರದರ್ಶನವಿರುವುದಿಲ್ಲ ಎಂದು ಅಲ್ಲಿನ ಚಿತ್ರಮಂದಿರದ ಮಾಲೀಕರು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಸಹ ಕರ್ಣಿ ಸೇನಾ ಬೆಂಬಲಿಗರು ಪದ್ಮಾವತ್ ಬಿಡುಗಡೆ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಮುಂಬೈ-ಆಗ್ರಾ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 3ನ್ನು ತಡೆದ ಪ್ರತಿಭಟನಾಕಾರರು ರಸ್ತೆ ತುಂಬಾ ಗಾಜಿನ ಬಾಟಲಿಗಳನ್ನು ಒಡೆದು ಹಾಕಿದ್ದಾರೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

ನಾಳೆ (ಜ.25) ಬಿಡುಗಡೆ ಕಾಣುತ್ತಿರುವ ಸಂಜಯ್ ಲೀಲಾ ಭನ್ಸಾಲಿ ಚಿತ್ರ ಪದ್ಮಾವತ್ ಗೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು ಚಿತ್ರ ಬಿಡುಗಡೆಯಾದ ಬಳಿಕ ಪರಿಸ್ಥಿತಿ ಸುಧಾರಿಸಲಿದೆಯೆ ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

error: Content is protected !!