ಲಖನೌ: ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು(ಎಐಎಂಪಿಎಲ್ಬಿ) ತನ್ನ ಕಾರ್ಯಕಾರಿಣಿ ಸಮಿತಿಯ ತುರ್ತು ಸಭೆ ಕರೆದಿದೆ.
ಸಮಿತಿಯಲ್ಲಿರುವ ಎಲ್ಲ 51 ಸದಸ್ಯರೂ ಇಂದು(ಭಾನುವಾರ) ನಡೆಯಲಿರುವ ಸಭೆಗೆ ಹಾಜರಾಗುವ ನಿರೀಕ್ಷೆಯಿದೆ. ಸುನ್ನೀ ವಕ್ಫ್ ಮಂಡಳಿ ಪ್ರತಿನಿಧಿಗಳೂ ಆಗಮಿಸಲಿದ್ದಾರೆ ಎನ್ನಲಾಗಿದೆ.
ರಾಜಕೀಯವಾಗಿ ಭಾರಿ ಮಹತ್ವ ಪಡೆದುಕೊಂಡಿರುವ ಈ ವಿವಾದವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಸುಪ್ರಿಂಕೋರ್ಟ್ ಸಂದಾನ ಸಮಿತಿಯನ್ನು ರಚಿಸಿತ್ತು. ಮಾರ್ಚ್ 13ರಂದು ನಡೆದ ಮೊದಲ ಸಭೆಯಲ್ಲಿ ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿ ಚರ್ಚೆ ನಡೆಸಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಫ್.ಎಂ. ಇಬ್ರಾಹಿಂ ಕಲೀಫುಲ್ಲಾ ಸಭೆಯ ಯಾವುದೇ ವಿಚಾರವನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದ್ದರು.Tags:















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ