ಬೆಂಗಳೂರು: 2018- 19 ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸ್ಪಷ್ಟನೆ ನೀಡಿದೆ.
ಇಂದು ಸಂಜೆ ಸಾಮಾಜಿಕ ಜಾಲತಾಣದಲ್ಲಿ ಮಾರ್ಚ್ 27 ರಂದು ನಡೆಯುವ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಸುದ್ದಿ ಹರಿದಾಡಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳ ಆತಂಕಕ್ಕೊಳಗಾಗಿದ್ದರು.
ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿರುವ ಪ್ರಶ್ನೆ ಪತ್ರಿಕೆಯು 2016 ರ ವೇಳೆಯದ್ದು, ಹೀಗಾಗಿ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ನಾಳೆ ನಿಗದಿಯಂತೆ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದು ಎಸ್ಎಸ್ಎಲ್ ಸಿ ಮಂಡಳಿ ಅಧಿಕೃತವಾಗಿ ತಿಳಿಸಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸುಗಮವಾಗಿ ನಡೆಯವುದು ಸಹಿಸದ ಕೆಲ ಕಿಡಿಗೇಡಿಗಳು ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು, ಇಂತಹ. ವಂದತಿಗಳಿಗೆ ಕಿವಿಗೊಡಬಾರದೆಂದು ಮಂಡಳಿ ಮನವಿ ಮಾಡಿದೆ.
ಅಲ್ಲದೆ ಈಗ ಹರಿದಾಡುತ್ತಿರುವ ಪ್ರಶ್ನೆ ಪತ್ರಿಕೆ ಪ್ರೌಢ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿದ್ದು, ಪರಿಶೀಲಿಸಬಹುದು ಎಂದು ತಿಳಿಸಿದೆ.
ಈ ಬಾರಿ ಒಟ್ಟು 8 ಲಕ್ಷದ 41 ಸಾವಿರದ 666 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರಲ್ಲಿ 4 ಲಕ್ಷದ 47 ಸಾವಿರದ 864 ಬಾಲಕರಿದ್ದಾರೆ. ಹಾಗೆಯೇ 3 ಲಕ್ಷದ 93 ಸಾವಿರದ 802 ಬಾಲಕಿಯರು ಪರೀಕ್ಷೆಯನ್ನು ಎದುರಿಸಲಿದ್ದಾರೆ.