ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಹಾಗೂ ಜಾಲ್ಸೂರು ಸೆಕ್ಟರ್ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಷನ್ ಆಸ್ಪತ್ರೆ, ಮಂಗಳೂರು ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಮಾರ್ಚ್ 24ರಂದು ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ಲ ಝುಹ್ರಿ ಮೊಗರ್ಪಣೆ ರವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು.
ಎಸ್.ವೈ.ಎಸ್ ಪುತ್ತೂರು ಝೋನ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಸುಣ್ಣಮೂಲೆ ಕಾರ್ಯಕ್ರಮ ಉದ್ಘಾಟಿಸಿದರು. ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಜಯನಗರ ದುಆ ನೆರೆವೇರಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಕೋಶಾಧಿಕಾರಿ ಕೆ.ಎಂ.ಎಚ್ ಝುಹ್ರಿ ಕೊಂಬಾಳಿ ಸಂದೇಶ ಭಾಷಣ ಮಾಡಿದರು. ಎಸ್.ವೈ.ಎಸ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್, ಸುಧಾಕರ ರೈ ಬಿಳಿಯಾರು, ಎಸ್.ವೈ.ಎಸ್ ಸುಳ್ಯ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕಿ, ಡಾ. ದಿನೇಶ್ ಮಂಗಳೂರು, ಪಿ.ಎ ಆರ್ಕೇಡ್ ಮಾಲಕರಾದ ಮುಹಮ್ಮದ್ ಪಿ.ಎ ಆಶಂಸಾ ನುಡಿದರು.
ಸುಧಾಕರ ರೈ ಬಿಳಿಯಾರು ಹಾಗೂ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್ ರವರಿಗೆ ಸನ್ಮಾನ ಮಾಡಲಾಯಿತು. ಸುಳ್ಯ ಕೇಂದ್ರ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯೀಲ್, ಎಸ್.ವೈ.ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ.ಬಿ ಅಶ್ರಫ್ ಸಅದಿ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಇಬ್ರಾಹೀಂ ಅಂಜದಿ ಮಂಡೆಕೋಲು, ದ.ಕ ಜಿಲ್ಲಾ ಎಸ್ಸೆಸ್ಸೆಫ್ ಮಾಜಿ ಪ್ರಧಾನ ಕಾರ್ಯದರ್ಶಿ ಶಮೀರ್ ಮೊಗರ್ಪಣೆ, ಎಸ್.ವೈ.ಎಸ್ ಸುಳ್ಯ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ರಫೀಕ್ ಚಾಯ್ಸ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಅಧ್ಯಕ್ಷರಾದ ಜುನೈದ್ ಎನ್.ಎ, ಸುಳ್ಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶಾಫಿ ಕುತ್ತಮಟ್ಟೆ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮಾಲಿಕ್ ಕೊಯಂಗಿ ಕಾರ್ಯಕ್ರಮ ನಿರೂಪಿಸಿದರು. ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಉಪಾಧ್ಯಕ್ಷರಾದ ಸಿದ್ದೀಕ್ ಗೂನಡ್ಕ ಸ್ವಾಗತಿಸಿ ಎಸ್ಸೆಸ್ಸೆಫ್ ಜಾಲ್ಸೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಸುಣ್ಣಮೂಲೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ