janadhvani

Kannada Online News Paper

ಎಲ್ಲಾ ರಾಜಕೀಯ ಪಕ್ಷಗಳಿಂದಲೂ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ

ಕೊಪ್ಪಳ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷಗಳಿಂದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ. ಟಿಕೆಟ್‍ಗಾಗಿ ಪೈಪೋಟಿ ಮಾಡಿದರೂ ಸಿಗೋದಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅನ್ಸಾರಿ ಆರೋಪಿಸಿದರು.

ನಗರದಲ್ಲಿ ಗುರುವಾರ ರಾತ್ರಿ ನಡೆದ ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಂಖಡರ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷದಿಂದ ಹಿಡಿದು ಎಲ್ಲ ರಾಷ್ಟ್ರೀಯ ಪಕ್ಷಗಳೂ ಮುಸ್ಲಿಮರಿಗೆ ಅನ್ಯಾಯ ಮಾಡಿವೆ. ಟಿಕೆಟ್ ಕೊಟ್ಟರೂ ಮುಸ್ಲಿಮರನ್ನು ಗೆಲ್ಲೋದಕ್ಕೆ ಬಿಡೋದಿಲ್ಲ. ಏನಾದ್ರೂ ತಗಾದೆ ತೆಗೆದು ಸೋಲಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

‘ರಾಜಕೀಯದಲ್ಲಿ ಮುಸ್ಲಿಮರು ಬೆಳೆಯುವುದಕ್ಕೆ ಆಗುತ್ತಿಲ್ಲ. ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೆ ರಾಜಕೀಯದಲ್ಲಿ ಮುಸ್ಲಿಮರು ಬೆಳೆದಿಲ್ಲ. ಇದು 1947ರಿಂದಲೂ ನಡೆದುಕೊಂಡು ಬಂದಿದೆ. ನಾನು ಲೋಕಸಭೆ ಚುನಾವಣೆಗೆ ನಿಲ್ಲುವುದಿಲ್ಲವೆಂದು ಈ ಮೊದಲೇ ಹೇಳಿದ್ದೆ. ಸಿದ್ದರಾಮಯ್ಯ ಅವರು ಸಹ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಅಂತ ಹೇಳಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಅನ್ಸಾರಿ ಅವರು ಸೋತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿ ಅನ್ನೋ ಅರ್ಥದಲ್ಲಿ ಹೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

ಟಿಕೆಟ್‍ಗೆ ಪೈಪೋಟಿ ಮಾಡಿದ್ರೆ ಟಿಕೆಟ್ ಸಿಗೋದಿಲ್ಲ. ಕಾರಣಾಂತರಗಳಿಂದ ಟಿಕೆಟ್ ಕೊಡೋದಿಲ್ಲ. ಹೀಗಾಗಿ ಮೂರು ಪಕ್ಷದಲ್ಲಿ ಅನ್ಯಾಯವಾಗಿದೆ. ಸ್ವತಃ ಸಿದ್ದರಾಮುಯ್ಯ ಅನ್ಸಾರಿ ಮನೆಯಲ್ಲಿ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಬೇಕು ಎಂದು ಹೇಳಿದರು. ಈಗ ಹಿಟ್ನಾಳ್‌ಗೆ ಟಿಕೆಟ್ ನೀಡಲಾಗಿದೆ. ಪಕ್ಷದ ವ್ಯವಸ್ಥೆಯೊಂದಿಗೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.

error: Content is protected !! Not allowed copy content from janadhvani.com