ನವದೆಹಲಿ: ರೈಲು ಟಿಕೆಟ್ ಹಾಗೂ ಏರ್ ಇಂಡಿಯಾ ಬೋರ್ಡಿಂಗ್ ಪಾಸ್ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಪ್ರಕಟಿಸಿರುವುದಕ್ಕೆ ರೈಲ್ವೆ, ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಇಂದೇ ಉತ್ತರ ನೀಡುವಂತೆಯೂ ಸೂಚಿಸಿದೆ.
ಮಾರ್ಚ್ 10ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಟಿಕೆಟ್ಗಳಲ್ಲಿ ಮೋದಿ ಭಾವಚಿತ್ರ ಇರುವುದಕ್ಕೆ ಸಂಬಂಧಿಸಿ ಆಯೋಗವು ಮಾರ್ಚ್ 27ರಂದು ರೈಲ್ವೆ ಇಲಾಖೆಯ ವಿವರಣೆ ಕೇಳಿತ್ತು. ಈ ಮಧ್ಯೆ, ಏರ್ ಇಂಡಿಯಾ ಬೋರ್ಡಿಂಗ್ ಪಾಸ್ಗಳಲ್ಲಿ ಮೋದಿ ಮತ್ತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಭಾವಚಿತ್ರ ಇರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಬಳಿಕ ಮಾರ್ಚ್ 25ರಂದು ಬೋರ್ಡಿಂಗ್ ಪಾಸ್ಗಳನ್ನು ಹಿಂಪಡೆಯಲಾಗಿತ್ತು.
ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಶುಕ್ರವಾರ ‘ಮೈ ಭಿ ಚೌಕೀದಾರ್’ ಎಂಬ ಜಾಹೀರಾತು ಇರುವ ಲೋಟಗಳಲ್ಲಿ ಟೀ ವಿತರಿಸಲಾಗಿತ್ತು. ಇದನ್ನು ಪ್ರಯಾಣಿಕರೊಬ್ಬರು ಆಕ್ಷೇಪಿಸಿದ್ದರು. ಆ ಲೋಟದ ಚಿತ್ರವನ್ನು ಟ್ವಿಟರ್ನಲ್ಲಿ ಪ್ರಕಟಿಸಿದ್ದರು. ಈ ಚಿತ್ರ ಟ್ವಿಟರ್ ಮತ್ತು ಫೇಸ್ಬುಕ್ನಲ್ಲಿ ವೈರಲ್ ಆಗಿತ್ತು. ಬಳಿಕ ಆ ಟೀ ಲೋಟಗಳ ಸರಬರಾಜನ್ನು ಸ್ಥಗಿತಗೊಳಿಸಿದ್ದಾಗಿಯೂ ಅದನ್ನು ಪೂರೈಸಿದ ಗುತ್ತಿಗೆದಾರನಿಗೆ ₹1 ಲಕ್ಷ ದಂಡ ವಿಧಿಸಲಾಗಿದೆ ಎಂದೂ ಹೇಳಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ