ಹಾಸನ: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಇಲ್ಲದಿದ್ದರೆ ನರೇಂದ್ರ ಮೋದಿ ಮುಗಿದು ಹೋಗುತ್ತಿದ್ದರು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಸಕಲೇಶಪುರ ತಾಲ್ಲೂಕು ವನಗೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿದ ಅವರು, ‘ಹಿರಿಯ ಮುತ್ಸದ್ದಿ ಅಡ್ವಾಣಿ ಈಗ ಏನಾಗಿದ್ದಾರೆ. ಅವರನ್ನ ರಾಷ್ಟಪತಿ ಮಾಡಲು ಆಗ್ತಿರಲಿಲ್ಲವೇ? ಒಬ್ಬ ವ್ಯಕ್ತಿ ಹೀಗೆ ನಡೆದುಕೊಳ್ಳುವುದು ಎಷ್ಟು ಸರಿ. ಮಾನಸಿಕ ವೇದನೆ ನೀಡುವ ಮೂಲಕ ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಿದ ಕೀರ್ತಿ ಮೋದಿಗೆ ಸಲ್ಲುತ್ತದೆ. ಅವರಿಂದಲೇ ಬೆಳೆದ ವ್ಯಕ್ತಿ ಹಿರಿಯರಿಗೆ ನೀಡುತ್ತಿರುವ ಗೌರವ ಅವರ ಸಂಸ್ಕೃತಿಯನ್ನು ತೋರುತ್ತದೆ’ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಬಾರಿ ಸ್ಪರ್ಧಿಸದಿರಲು ನಿರ್ಧರಿಸಿದ್ದೆ, ಆದರೆ ಮಹಾ ಘಟಬಂಧನ್ ಮುನ್ನಡೆಸಲು ಲೋಕಸಭೆಯಲ್ಲಿ ಇರಲೇಬೇಕು ಎಂಬ ನಾಯಕರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎರಡೇ ದಿನ ಪ್ರಚಾರ ನಡೆಸುತ್ತೇನೆ. ಸಂಪೂರ್ಣ ಜವಾಬ್ದಾರಿಯನ್ನು ಪರಮೇಶ್ವರ್ ವಹಿಸಿಕೊಂಡಿದ್ದಾರೆ ಎಂದು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ