ಮೂಡಬಿದಿರೆ – ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡಬಿದಿರೆ – ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಪಿಯುಸಿ ವ್ಯಾಸಂಗ ಮಾಡುತ್ತಿರುವ ಚಿತ್ರದುರ್ಗದ ರಚನಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ, ಬೆಳಗ್ಗೆ ಸಂಸ್ಥೆಯ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ದಿನಗಳಲ್ಲಿ ಪ್ರಸಕ್ತ ಸಂಸ್ಥೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾವ್ಯಾ ಪೂಜಾರಿಯ ಸಾವಿನ ಸಂದರ್ಭ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಪೊಲೀಸ್ ಇಲಾಖೆ ಎಚ್ಚೆತ್ತು ಸೂಕ್ತ ತನಿಖೆ ನಡೆಸಬೇಕಾಗಿದೆ

Leave a Reply

Your email address will not be published. Required fields are marked *

error: Content is protected !!