ಮದೀನಾ : ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯರಿಬ್ಬರು ಮೃತಪಟ್ಟ ಘಟನೆ ಎಪ್ರಿಲ್ 6ರಂದು ನಡೆದಿದೆ. ಮದೀನಾ ಮುನವ್ವರಕ್ಕೆ 80 ಕಿ.ಮಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರನ್ನು ಕರ್ನಾಟಕ, ಹಾಸನದ ಅಬ್ದುಲ್ ಜಾವೀದ್ ಹಾಗೂ ಉತ್ತರ ಪ್ರದೇಶದ ಇರ್ಫಾನ್ ಎಂದು ಗುರುತಿಸಲಾಗಿದೆ.

ಅಪಘಾತ ಮಾಹಿತಿ ಅರಿತ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕಾರ್ಯಕರ್ತರು ಮೃತರ ದಫನ ಕಾರ್ಯಕ್ಕೆ ಬೇಕಾದ ಅಗತ್ಯ ದಾಖಲೆಗಳನ್ನು ಕಲೆಹಾಕಿದರು. ಮೃತರ ಸಂಬಂಧಿಕರ ಮೂಲಕ ಸೌದಿ ಅರೇಬಿಯಾದ ಪೊಲೀಸ್ ಇಲಾಖೆ, ಆಸ್ಪತ್ರೆ ಗಳ ದಾಖಲೆಗಳನ್ನು ಸಂಗ್ರಹಿಸಿದರು. ನಂತರ ಇಂಡಿಯನ್ ಎಂಬಾಸಿಯ NOCಗೆ ಬೇಕಾದ ಅಗತ್ಯ ದಾಖಲೆಗಳನ್ನು ಸರಿಪಡಿಸಿದರು.
ಜಾವೀದ್ ಅಂತ್ಯ ಸಂಸ್ಕಾರವನ್ನು ಸೋಮವಾರ ಇಶಾ ನಮಾಜಿನ ಬಳಿಕ ಹಾಗೂ ಇರ್ಫಾನ್ ಅವರ ಅಂತ್ಯ ಸಂಸ್ಕಾರವು ಮಂಗಳವಾರ ಲುಹ್ರ್ ನಮಾಜಿನ ಬಳಿಕ ಮದೀನಾ ಮುನವ್ವರದ ಜನ್ನತುಲ್ ಬಖೀದಲ್ಲಿ ನೆರವೇರಿಸಲಾಯಿತು. ಈ ವೇಳೆ ಮೃತರ ಸಂಬಂಧಿಕರು ಹಾಗೂ ಕೆಸಿಎಫ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ