ದ್ವಿತೀಯ ಪಿಯುಸಿ ಫಲಿತಾಂಶ -ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟ

ಬೆಂಗಳೂರು, ಏ.14:-ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶವನ್ನು ಪ್ರಕಟಿಸಲು ಪಿಯುಸಿ ಮಂಡಳಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ನಾಳೆ ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ನಲ್ಲಿ ಹಾಗೂ ಮಂಗಳವಾರ ಎಲ್ಲ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾ. 1 ರಿಂದ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ 1031 ಕೇಂದ್ರಗಳಲ್ಲಿ ನಡೆದಿತ್ತು. ಈ ಬಾರಿ ಆನ್‌ಲೈನ್ ಮೂಲಕ ಅಂಕಗಳನ್ನು ಸರ್ವರ್‌ಗೆ ಸೇರಿಸುವ ಪದ್ಧತಿ ಆರಂಭಿಸಿರುವುದರಿಂದ ಮೌಲ್ಯಮಾಪನದ ನಂತರ ಇತರ ಪ್ರಕ್ರಿಯೆಗಳು ಬಹುಬೇಗನೆ ಮುಗಿದಿದೆ. ಹಾಗಾಗಿ, ಫಲಿತಾಂಶವು ನಾಳೆಯೇ ಪ್ರಕಟಿಸಲಾಗುವುದು ಎಂದು ಪಿಯು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು http://pue.kar.nic.ವೆಬ್‌ಸೈಟ್‌ನಲ್ಲಿ ವಿವರವನ್ನು ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!