ಮಲ್ಯ,ನೀರವ್ ಮೋದಿಯಂತೆ 36 ಉದ್ಯಮಿಗಳು ವಿದೇಶಕ್ಕೆ ಪರಾರಿಯಾಗಿದ್ದಾರೆ

ನವದೆಹಲಿ : ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿ ಮಾಡದೇ ವಂಚಿಸಿ ವಿದೇಶಕ್ಕೆ ಪರಾರಿಯಾದವರು ಬರೀ ವಿಜಯ್ ಮಲ್ಯ, ನೀರವ್ ಮೋದಿ ಮಾತ್ರ ಎಂದು ಹಲವರು ಅಂದುಕೊಂಡಿದ್ದಾರೆ. 

ಆದರೆ ವಿಜಯ್ ಮಲ್ಯ, ನೀರವ್ ಮೋದಿಯಂತವರು ಇನ್ನೂ ಹಲವು ಮಂದಿ ಇದ್ದಾರೆ ಎಂಬ ವಿಚಾರ ಇದೀಗ ತಿಳಿದುಬಂದಿದ್ದು, ಜಾರಿ ನಿರ್ದೇಶನಾಲಯವೇ ತನಿಖಾ ದಳದ ವಿಶೇಷ ನ್ಯಾಯಾಧೀಶರಾದ ಅರವಿಂದ್ ಕುಮಾರ್ ಅವರಿಗೆ ಇಂಥದ್ದೊಂದು ವಿಷಯವನ್ನು ಬಹಿರಂಗಪಡಿಸಿದ್ದಾರೆ.

ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಸ್ಕಿ ಮಾತ್ರವಲ್ಲದೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಇನ್ನೂ 36 ಉದ್ಯಮಿಗಳು ಆರ್ಥಿಕ ವಂಚನೆ ಹಾಗೂ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಅವರು ಭಾರತದಿಂದ ಪರಾರಿಯಾಗಿದ್ದಾರೆ ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ಬಹಿರಂಗಪಡಿಸಿದೆ.

Leave a Reply

Your email address will not be published. Required fields are marked *

error: Content is protected !!