janadhvani

Kannada Online News Paper

ಮತ ಚಲಾಯಿಸಿದ್ದನ್ನು ಸೆರೆಹಿಡಿದು ಜಾಲತಾಣದಲ್ಲಿ ಹರಿಯಬಿಟ್ಟು ನೀತಿ-ಸಂಹಿತೆ ಉಲ್ಲಂಘನೆ

ಈ ವರದಿಯ ಧ್ವನಿಯನ್ನು ಆಲಿಸಿ

ಬೆಂಗಳೂರು, ಏ.18- ಮತ ಚಲಾಯಿಸಿರುವುದನ್ನು ಗೌಪ್ಯವಾಗಿಟ್ಟುಕೊಳ್ಳುವಂತೆ ಸೂಚಿಸಿದ್ದರೂ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ನೀತಿ-ಸಂಹಿತೆ ಉಲ್ಲಂಘನೆ ಮಾಡಿರುವ ಪ್ರಕರಣಗಳು ನಡೆದಿವೆ.

ಮಂಡ್ಯ ಜಿಲ್ಲೆ, ನಾಗಮಂಗಲದಲ್ಲಿ ಮತಗಟ್ಟೆ ಸಂಖ್ಯೆ 132ರಲ್ಲಿ ರಾಜೇಶ್ ಎಂಬುವವರು ತಾವು ಮತ ಚಲಾಯಿಸಿದ್ದನ್ನು ಮೊಬೈಲ್‍ನಲ್ಲಿ ಚಿತ್ರೀಕರಣ ಮಾಡಿಕೊಂಡು ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ನೆಲಮಂಗಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪಮೊಯ್ಲಿ ಅವರು ಮತಯಂತ್ರದಲ್ಲಿ ಕಾಂಗ್ರೆಸ್ ಚಿಹ್ನೆ ಇರುವ ಸಂಖ್ಯೆಯನ್ನು ಒತ್ತಿ ಹಿಡಿದಿರುವ ದೃಶ್ಯವನ್ನು ಮೊಬೈಲ್‍ನಲ್ಲಿ ಫೋಟೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹಾಕಲಾಗಿದೆ.

ನಂತರ ಕಾಂಗ್ರೆಸ್‍ಗೆ ಮತ ಹಾಕುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಲಾಗಿದೆ. ಗೌಪ್ಯ ಮತದಾನವಾಗಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ತಾವು ಯಾರಿಗೆ ಮತ ಹಾಕಿದ್ದೇವೆಂದು ಹೇಳಿಕೊಳ್ಳುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ.

error: Content is protected !! Not allowed copy content from janadhvani.com