janadhvani

Kannada Online News Paper

ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ: ಆರೋಪಿ ವಿರುದ್ಧ ಕಠಿಣ ಕ್ರಮ- ಕುಮಾರಸ್ವಾಮಿ

ಬೆಂಗಳೂರು, ಎ.19: ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ನಿಗೂಢ ಸಾವು ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಈ ಕುರಿತು ಟ್ವಿಟ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಯಚೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣ ಅತೀವ ನೋವು ತಂದಿದೆ. ಈ ಪ್ರಕರಣದ ಕುರಿತು ರಾಯಚೂರು ಎಸ್ಪಿ ಅವರಿಂದ ಮಾಹಿತಿ ಪಡೆದಿದ್ದು, ಒಬ್ಬನನ್ನು ಬಂಧಿಸಿದ್ದು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ. ಹೆಣ್ಣುಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯ ಖಂಡನೀಯ ಎಂದಿದ್ದಾರೆ.

error: Content is protected !! Not allowed copy content from janadhvani.com