janadhvani

Kannada Online News Paper

ಸುಪ್ರೀಂ ತೀರ್ಪನ್ನು ತಪ್ಪಾಗಿ ವಿವರಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ನವದೆಹಲಿ(ಏ.22): ರಫೆಲ್ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ಉಚ್ಚರಿಸಿದ್ದಕ್ಕಾಗಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಚಾರದ ಕಾವಿನಲ್ಲಿ ಇಂತಹ ತಪ್ಪಾದ ಹೇಳಿಕೆ ನೀಡಿದ್ದಾಗಿ ಅಫಿಡವಿಟ್ ನಲ್ಲಿ ಉಲ್ಲೇಖಿಸಿರುವ ರಾಹುಲ್, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ವಿವರಿಸಿದ್ದ ರಾಹುಲ್ ಅವರಿಗೆ ಕೋರ್ಟ್ ಏಪ್ರಿಲ್ 22 ರೊಳಗೆ ತಮ್ಮ ಮಾತಿಗೆ ತಕ್ಕ ವಿವರಣೆಯನ್ನು  ನೀಡಬೇಕೆಂದು ನಿರ್ದೇಶನ ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ರಫೆಲ್ ತೀರ್ಪಿನ ಕುರಿತು ರಾಹುಲ್ ಗಾಂಧಿ ಮಾಧ್ಯಮಗಳೆದುರು ನೀಡಿದ್ದ ಹೇಳಿಕೆ ತೀರ್ಪನ್ನು ತಪ್ಪಾಗಿ ಬಿಂಬಿಸಿದೆ ಎಂದು ಅಸಮಾಧಾನ ಹೊರಹಾಕಿದೆ.ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ವಿವರಣೆ ಕೋರಿತ್ತು. 

error: Content is protected !! Not allowed copy content from janadhvani.com