janadhvani

Kannada Online News Paper

ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ನಿಂದ ದ ಅವಾ ಕಾನ್ಫರೆನ್ಸ್

ಮುಡಿಪು: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಮುತ ಅಲ್ಲಿಂ ಸಂಗಮ ಹಾಗೂ ದ ಅವಾ ಕಾನ್ಫರೆನ್ಸ್ ಎಪ್ರಿಲ್ 23 ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಅಲ್- ಮದೀನಾ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಲಿರುವುದು.

ಅಲ್- ಮದೀನಾ ಸಾರಥಿ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದ್ ಉದ್ಘಾಟಿಸಲಿರುವರು.

ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸ ಅದಿ ಹರೇಕಳ ಅಧ್ಯಕ್ಷತೆ ವಹಿಸಲಿರುವರು.

ಮಲಪ್ಪುರಂ ಅಹ್ಸನಿ ಕಾಲೇಜು ಫ್ರೊಪೆಸರ್ ಅಬ್ದುಲ್ಲಾ ಅಹ್ಸನಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ತರಗತಿಯನ್ನು ನಡೆಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕಾರ್ಯದರ್ಶಿಇಲ್ಯಾಸ್ ಪೊಟ್ಟೊಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.