janadhvani

Kannada Online News Paper

ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದಿಲ್ಲ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪರ್ಧಿಸುವ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಮತ್ತೆ ಅಜಯ್ ರಾಯ್​ ಕಣಕ್ಕೆ ಇಳಿಯಲಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಕೇಳಿಬಂದಿದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆಯ ಊಹಾಪೋಹಕ್ಕೆ ಕಾಂಗ್ರೆಸ್ ತೆರೆ ಎಳೆದಿದೆ.  

ಈ ಕುರಿತು ಮಾತನಾಡಿದ ಕಾಂಗ್ರೆಸ್​ ಅಭ್ಯರ್ಥಿ ಅಜಯ್​ ರಾಯ್​, ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ನಾನೇ ಸ್ಪರ್ಧಿಸುವಂತೆ ಪಕ್ಷದಿಂದ ಸೂಚನೆ ನೀಡಲಾಗಿದೆ. ಇದು ಪಕ್ಷದ ಹೈಕಮಾಂಡ್​ ನಿರ್ಧಾರ. ನಾವು ಪಕ್ಷದ ಕಾರ್ಯಕರ್ತರಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದರೂ ಅವರ ಪರವಾಗಿ ಪ್ರಚಾರ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದ ಅವರು, ಪ್ರಿಯಾಂಕಾ ಗಾಂಧಿ ಅವರು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಹಾಗೆಯೇ ಉತ್ತರಪ್ರದೇಶದ ಮತ್ತೊಂದು ಬಿಜೆಪಿ ಭದ್ರಕೋಟೆಯಾದ ಗೋರಖ್​ಪುರದಿಂದ ಮಧುಸೂದನ್​ ಅವರಿಗೆ ಕಾಂಗ್ರೆಸ್​ ಟಿಕೆಟ್ ನೀಡಿ, ಇಂದು ಹೆಸರು ಪ್ರಕಟಿಸಿದೆ.

error: Content is protected !! Not allowed copy content from janadhvani.com