ನವದೆಹಲಿ (ಏ.25): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿ ದೇಶದ ಅನೇಕ ಮುಖ್ಯಮಂತ್ರಿಗಳಿಗೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹ್ಮದ್ ಉಗ್ರ ಸಂಘಟನೆ ಜೀವ ಬೆದರಿಕೆವೊಡ್ಡಿದೆ. ಈ ವಿಚಾರವನ್ನು ಉತ್ತರ ಪ್ರದೇಶ ಪೊಲೀಸರು ಖಚಿತಪಡಿಸಿದ್ದಾರೆ.
ಈ ಬಗ್ಗೆ ಕೆಲ ಪತ್ರಗಳು ಉತ್ತರ ಪ್ರದೇಶ ಪೊಲೀಸರಿಗೆ ಲಭ್ಯವಾಗಿದೆ. ಜೆಇಎಂ ಉಗ್ರ ಸಂಘಟನೆ ಇದನ್ನು ಬರೆದಿದ್ದು, ಯೋಗಿ ಆದಿತ್ಯನಾಥ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆರ್ಎಸ್ಎಸ್ ಮುಖ್ಯಮಸ್ಥ ಮೋಹನ್ ಭಾಗ್ವತ್ ಅವರಿಗೆ ಜೀವ ಬೆದರಿಕೆವೊಡ್ಡಲಾಗಿದೆ.
ಇನ್ನು ದೇಶದ ಅನೇಕ ಕಡೆಗಳಲ್ಲಿ ದಾಳಿ ನಡೆಸುವ ಎಚ್ಚರಿಕೆಯನ್ನು ಪತ್ರದಲ್ಲಿ ನೀಡಲಾಗಿದೆ. “ಉತ್ತರ ಪ್ರದೇಶದ ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಕೆಲ ರೈಲ್ವೆ ನಿಲ್ದಾಣದಲ್ಲಿ ನಾವು ಬಾಂಬ್ ಸ್ಫೋಟ ಮಾಡುತ್ತೇವೆ,” ಎಂದು ಎಚ್ಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾವುದೋ ಕಿಡಿಗೇಡಿಗಳು ಇದನ್ನು ಬರೆದಿರಬಹುದು ಎನ್ನುವ ಶಂಕೆ ಕೂಡ ಮೂಡಿದೆ. ಆದರೆ, ಇತ್ತೀಚೆಗೆ ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಹಾಗಾಗಿ, ಈ ವಿಚಾರವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ