ನವದೆಹಲಿ : ಕೆಲ ದಿನಗಳ ಹಿಂದೆ ಒರಿಸ್ಸಾದ ಸಂಬಲ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಮೊಹಮ್ಮದ್ ಮುಹ್ಸಿನ್ ಅವರ ಅಮಾನತು ಆದೇಶವನ್ನು ತಡೆಹಿಡಿಯಲಾಗಿದೆ.
ಏ. 18ರಂದು ಮುಹಮ್ಮದ್ ಮುಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮುಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಎಲ್ಲರ ವಾಹನವನ್ನೂ ತಪಾಸಣೆ ಮಾಡಬೇಕಾಗುತ್ತದೆ ಎಂದು ಮುಹ್ಸಿನ್ ತಮ್ಮ ಕೆಲಸವನ್ನು ಸಮರ್ಥಿಸಿಕೊಂಡಿದ್ದರು. ಕೆಲ ದಿನಗಳ ನಂತರ ಅವರನ್ನು ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಯ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು.
ಕರ್ನಾಟಕ ಕೇಡರ್ನ ಮೊಹ್ಸಿನ್ ಅವರನ್ನು ಸೇವೆಯಿಂದ ಅಮಾನತು ಮಾಡಿದ್ದಕ್ಕೆ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿ, ತನ್ನ ಹೆಲಿಕಾಪ್ಟರ್ ಅನ್ನು ತಪಾಸಣೆ ಮಾಡುವ ಧೈರ್ಯ ತೋರಿದರು ಎಂಬ ಒಂದೇ ಕಾರಣಕ್ಕೆ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಅಮಾನತು ಮಾಡಿದ್ದನ್ನು ನಾನು ವಿರೋಧಿಸುತ್ತೇನೆ. ಸ್ವಯಂ ಚೌಕಿದಾರನೆಂದು ಕರೆದುಕೊಳ್ಳುವ ಮೋದಿ ಅವರ ಈ ನಡೆ ಸರಿಯಲ್ಲ. ನೀವು ಯಾವುದೇ ತಪ್ಪು ಮಾಡಿಲ್ಲ, ನಿಮ್ಮ ಬಳಿ ಅನುಮಾನಾಸ್ಪದವಾದುದು ಏನೂ ಇಲ್ಲ ಎಂಬ ನಂಬಿಕೆ ಇದ್ದಮೇಲೆ ಈ ರೀತಿಯ ಅಸುರಕ್ಷತಾ ಭಾವವೇಕೆ ಮಿಸ್ಟರ್ ಎಲೆಕ್ಷನ್ ಚೌಕಿದಾರ್? ಎಂದು ಟ್ವೀಟ್ನಲ್ಲಿ ವ್ಯಂಗ್ಯವಾಗಿ ಪ್ರಶ್ನಿಸಿದ್ದರು.
ಬೆಂಗಳೂರಿನ ನ್ಯಾಯಮಂಡಳಿ ಮುಂದೆ ಹಾಜರಾಗಿದ್ದ ಮುಹ್ಸಿನ್, ನಾನು ಎಸ್ಪಿಜಿ ಅಧಿಕಾರಿಗಳ ಬಳಿ ಅನುಮತಿ ಪಡೆದ ನಂತರವೇ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದೆ. ಆದರೆ, ಮೊದಲು ತಪಾಸಣೆಗೆ ಒಪ್ಪಿಗೆ ನೀಡಿದ್ದ ಅಧಿಕಾರಿಗಳು ನಂತರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಮುಹ್ಸಿನ್ ಅವರನ್ನು ಅಮಾನತುಗೊಳಿಸಿದ್ದ ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡಿರುವ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮುಹ್ಸಿನ್ ಅವರು ಕೆಲಸದಲ್ಲಿ ಮುಂದುವರಿಯಬಹುದು. ಅವರ ಮೇಲೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಎಸ್ಪಿಜಿ ಭದ್ರತೆಯಲ್ಲಿದ್ದಾರೆ ಎಂದ ಮಾತ್ರಕ್ಕೆ ಅವರು ಏನು ಬೇಕಾದರೂ ಮಾಡಬಹುದು ಎಂದು ಅರ್ಥವಲ್ಲ ಎಂದು ಹೇಳಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್