ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಗುರುವಾರ ಸಂಜೆ ಮತ್ತು ಶುಕ್ರವಾರ ಬೆಳಗ್ಗೆ ಬೃಹತ್ ರೋಡ್ ಶೋಗಳನ್ನು ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಎರಡನೇ ಬಾರಿ ಲೋಕಸಭೆಗೆ ವಾರಾಣಸಿಯಿಂದ ಆಯ್ಕೆ ಬಯಸಿ ಮೋದಿ ಉಮೇದುವಾರಿಕೆ ಸಲ್ಲಿಸಿದರು.ಲೋಕಸಭೆಯಲ್ಲಿ ಒಂದು ಸ್ಥಾನ ತುಂಬಿಸುವುದಕ್ಕಾಗಿ ನಾನು ಬಿಜೆಪಿ ಪಕ್ಷದಿಂದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ.
ಸತ್ಯ, ನಿಷ್ಠೆ ಮತ್ತು ಭಾರತದ ಸಂವಿಧಾನಕ್ಕೆ ಗೌರವಿಸಿ, ಭಾರತದ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುತ್ತೇನೆ ಎಂದು ನಾಮಪತ್ರ ಸಲ್ಲಿಕೆ ವೇಳೆ ನರೇಂದ್ರ ಮೋದಿ ಶಪಥ ಮಾಡಿದರು. ನಾಮಪತ್ರ ಸಲ್ಲಿಕೆ ಕಾರ್ಯ ಪೂರ್ಣಗೊಂಡ ಬಳಿಕ ಕಚೇರಿಯೊಳಗಿದ್ದ ಎಲ್ಲ ಅಧಿಕಾರಿಗಳಿಗೆ, ಸೂಚಕರಾಗಿ ಸಹಿ ಮಾಡಿದವರಿಗೆ ಧನ್ಯವಾದ ಸಮರ್ಪಿಸಿ, ಕುಶಲೋಪರಿ ವಿಚಾರಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತಿತರರು ಸಾಥ್ ನೀಡಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ