ಬೆಂಗಳೂರು(ಏ.26): ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಲ್ಲದ ಕಾರಣ ಕೊಂಚ ನಿರಾಳವಾಗಿದ್ದ ವಾಹನ ಸವಾರರಿಗೆ ಕಹಿಸುದ್ದಿ ಸಿಕ್ಕಿದೆ. ಮೂರು ತಿಂಗಳ ಮುನ್ನ ಬೆಲೆ ಏರಿಕೆಗೆ ತತ್ತರಿಸಿ ಹೋಗಿದ್ದ ವಾಹನ ಸವಾರರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಮುಂದಿನ ದಿನಗಳಲ್ಲಿ ಇಂಧನ ದರದಲ್ಲಿ ಭಾರೀ ಏರಿಕೆಯಾಗಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಲೀಟರ್ಗೆ 5 ರೂ.ನಿಂದ 10 ರೂ. ಏರಿಕೆಯಾಗಬಹುದು ಎಂದು ಹೇಳಲಾಗುತ್ತಿದೆ.
ಇರಾನ್ನಿಂದ ತೈಲ ಆಮದು ಮಾಡಿಕೊಳ್ಳಲು ಅಮೆರಿಕ ನೀಡಿದ್ದ ವಿನಾಯಿತಿ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. ಇದು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಕಾರಣವಾಗಿದೆ. ಈ ಆಮದು ಮೇಲಿನ ನಿರ್ಬಂಧ ಹೇರಿದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 5 ರಿಂದ 10 ರೂ.ವರೆಗೆ ಏರಿಕೆಯಾಗಲಿದೆ ಎನ್ನುತ್ತಿವೆ ಮೂಲಗಳು.
ಇತ್ತೀಚೆಗೆ ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹ 75.33 ಇದೆ. ಡೀಸೆಲ್ ದರ 68.61 ರೂ. ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 72.95 ರೂ. ಮತ್ತು ಡೀಸೆಲ್ ದರ 66.46 ರೂ. ಇದೆ.
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪೆಟ್ರೋಲ್ ದರ 75.71 ರೂ. ಮತ್ತು ಡೀಸೆಲ್ ದರ 70.17 ರೂ, ಪಶ್ಚಿಮ ಬಂಗಾಳ ಕೋಲ್ಕತಾದಲ್ಲಿ ಪೆಟ್ರೋಲ್ ದರ 74.97 ರೂ. ಮತ್ತು ಡೀಸೆಲ್ ದರ 68.20 ರೂ, ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ 78.52 ರೂ. ಮತ್ತು ಡೀಸೆಲ್ ದರ 69.56 ರೂ. ಆಗಿದೆ.
ಸದ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್‌ಗೆ ರೂ. 4636 ಕ್ಕೆ ತಲುಪಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣಲಿದ್ದೇವೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ