ನವದೆಹಲಿ, ಏ.28:- ಪ್ರಜಾಸತ್ತೆಯ ಮಹಾ ಹಬ್ಬದಲ್ಲಿ ನಾಳೆ 4ನೇ ಹಂತದ ಮತದಾನಕ್ಕೆ ವೇದಿಕೆ ಸಿದ್ಧಗೊಂಡಿದೆ. 71 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು 945 ಅಭ್ಯರ್ಥಿಗಳ ಹಣೆಬರಹವನ್ನು 12.79 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.
ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ವ್ಯಾಪಕ ಬಂದೋಬಸ್ತ್ ಕೈಗೊಂಡಿದೆ. ಮಹಾರಾಷ್ಟ್ರದ 17, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 13, ಪಶ್ಚಿಮ ಬಂಗಾಳದಲ್ಲಿ 8, ಮಧ್ಯ ಪ್ರದೇಶ ಮತ್ತು ಓಡಿಶಾ ದಲ್ಲಿ 6, ಬಿಹಾರದ 5, ಜಾರ್ಖಂಡ್ 3, ಜಮ್ಮು-ಕಾಶ್ಮೀರದ ಅನಂತನಾಗ್ ಲೋಕಸಭಾ ಕ್ಷೇತ್ರಕ್ಕೂ ನಾಳೆ ಮತದಾನ ನಡೆಯುತ್ತಿದೆ.
ಬಿಜೆಪಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ರೂಪಿಸಿದ್ದು, ಮುಂದಿನ ಹಂತಗಳಲ್ಲಿ ನಡೆಯಲಿರುವ ಚುನಾವಣೆ ಬಿಜೆಪಿ ಪಾಲಿಗೆ ಅತ್ಯಂತ ನಿರ್ಣಾಯಕವಾಗಲಿದೆ.
ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಬಿಜೆಪಿ ಕಣ್ಣಿಟ್ಟಿದ್ದು ವ್ಯಾಪಕ ಪ್ರಚಾರ ಕೈಗೊಂಡಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಹಿಂದಿ ಮಾತನಾಡುವ ರಾಜ್ಯಗಳ 71 ಕ್ಷೇತ್ರಗಳ ಪೈಕಿ 45 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು.
ಆದರೆ ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜ ವಾದಿ ಮತ್ತು ಬಹುಜನ ಸಮಾಜ ಪಕ್ಷ ಮೈತ್ರಿಮಾಡಿಕೊಂಡಿರುವುದರಿಂದ ಬಿಜೆಪಿಗೆ ಕಠಿಣ ಸವಾಲು ಎದುರಾಗಿದೆ. ಜಾರ್ಖಂಡ್‌ನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ. ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿರುವುದರಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಹಿಂದಿ ಮಾತನಾಡುವ ರಾಜ್ಯಗಳಲ್ಲಿ ನರೇಂದ್ರ ಮೋದಿ ವರ್ಚಸ್ಸು ಹೇಗೆ ಮೊಡಿ ಮಾಡಲಿದೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಮಹಾರಾಷ್ಟ್ರದಲ್ಲಿ 6 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯುತ್ತಿದ್ದು, ಇಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿವೆ. ಈ ಮೈತ್ರಿ ಕೂಟಕ್ಕೆ ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಕೂಡ ಪ್ರಬಲ ಪೈಪೋಟಿ ನೀಡಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ