ನವದೆಹಲಿ: ಶ್ರೀಲಂಕಾದಲ್ಲಿ ಐಎಸ್ಐಎಸ್ ಉಗ್ರರು ನಡೆಸಿದ ಸರಣಿ ಬಾಂಬ್ ಸ್ಫೋಟದಿಂದ ಎಚ್ಚೆತ್ತುಕೊಂಡಿರುವ ಭಾರತ ಕಟ್ಟೆಚ್ಚರ ವಹಿಸಿದೆ. ಈ ಬೆನ್ನಲ್ಲೇ ಶ್ರೀಲಂಕಾದಲ್ಲಿ ಸ್ಪೋಟ ನಡೆಸಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ ಸೋಮವಾರ ಕೇರಳದಿಂದ ಬಂಧಿಸಿದೆ.
ಬಂಧಿತ ಆರೋಪಿಯನ್ನು ರಿಯಾಝ್ ಅಬೂಬಕರ್(29) ಎಂದು ಗುರುತಿಸಲಾಗಿದ್ದು, ಕೇರಳದ ಪಾಲಕ್ಕಾಡ್ ಮೂಲದವನು ಎನ್ನಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಆತಂಕಕಾರಿ ಅಂಶವೊಂದನ್ನು ಬಹಿರಂಗಪಡಿಸಿರುವ ಆತ, ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರದಂದು ನಡೆದ ಸರಣಿ ಬಾಂಬ್ ದಾಳಿಯ ರೂವಾರಿಯಾಗಿದ್ದ ನ್ಯಾಷನಲ್ ತೌಹೀದ್ ಜಮಾತ್ ಎಂಬ ಸಲಫಿ ಸಂಘಟನೆಯ ನಾಯಕ ಝಹ್ರಾನ್ ಹಾಷಿಮ್ ನೀಡುತ್ತಿದ್ದ ಆದೇಶ ಹಾಗೂ ಅವರ ಭಾಷಣದ ವೀಡಿಯೋಗಳನ್ನು ತಾನು ಅನುಕರಿಸುತ್ತಿದ್ದಾಗಿ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ಕೇರಳದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾಗಿ ಹೇಳಿದ್ದಾನೆ.
ಇದೇ ಸಂದರ್ಭದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಅಬ್ದುಲ್ ರಶೀದ್ ಅಬ್ದುಲ್ಲಾ ಜೊತೆ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿರುವ ರಿಯಾಝ್, ಆತನ ಆಡಿಯೋ ಕ್ಲಿಪ್ ಹಾಗೂ ವಿಡಿಯೋ ತುಣುಕುಗಳನ್ನ ನೋಡುತ್ತಿದ್ದೆ ಎಂದಿದ್ದಾನೆ. ಅಲ್ಲದೆ, ಸಿರಿಯಾದಲ್ಲಿದ್ದಾನೆ ಎನ್ನಲಾಗಿರುವ ಐಎಸ್ ಸಂಘಟನೆಯ ಶಂಕಿತ ಉಗ್ರ ಅಬ್ದುಲ್ ಖಯೂಮ್ ಅಲಿಯಾಸ್ ಅಬು ಖಾಲಿದ್ ಜೊತೆ ಆನ್ಲೈನ್ ಚಾಟ್ ಸಹ ಮಾಡಿರುವುದಾಗಿ ಹೇಳಿದ್ದಾನೆ.
ಅಲ್ಲದೆ, ಇವರು ಭಾರತದಲ್ಲಿ ದಾಳಿ ನಡೆಸಲು ಪ್ರೇರೇಪಿಸುವಂತಹ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಕೇರಳದ ಕಾಸರಗೋಡು ಮತ್ತು ಪಾಲಕ್ಕಾಡ್ ನ ಮೂರು ಸ್ಥಳಗಳಲ್ಲಿ ಭಾನುವಾರ ಎನ್ಐಎ ಶೋಧ ನಡೆಸಿ ಶಂಕಿತ ಮೂವರನ್ನು ವಿಚಾರಣೆಗೆ ಕರೆದಿತ್ತು ಕಾಸರಗೋಡಿನ ಇಬ್ಬರಿಗೆ ಉಗ್ರ ಸಂಘಟನೆಯೊಂದಿಗ ಸಂಪರ್ಕವಿಲ್ಲ ಎಂದು ತನಿಖೆ ನಡೆಸಿದ ಎನ್ಐಎ ಹೇಳಿದೆ.
ಬಂಧಿತ ರಿಯಾಝ್ ತನ್ನ ಫೇಸ್ಬುಕ್ ಖಾತೆಯಲ್ಲಿ ಸುನ್ನೀ ಆಚಾರಗಳನ್ನು ಶಿರ್ಕ್ ಎನ್ನುತ್ತಾ ‘ಸಲಫಿಸಂ’ ಪ್ರಚಾರ ಪಡಿಸುತ್ತಿದ್ದ.

















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ