ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಪ್ರಕರಣದಲ್ಲಿ ಮೋದಿಗೆ ಬಿಗ್ ರಿಲೀಫ್ ಸಿಕ್ಕಿದೆ.
ನರೇಂದ್ರ ಮೋದಿ ಯಾವುದೇ ನೀತಿ ಸಂಹಿತೆ ಉಲ್ಲಂಘಿಸಿಲ್ಲ ಅಂತ ಆಯೋಗ ತಿಳಿಸಿದೆ. ಮಹಾರಾಷ್ಟ್ರದ ವಾರ್ಧಾದಲ್ಲಿ ಏಪ್ರಿಲ್ 1ರಂದು ಮಾಡಿದ್ದ ಭಾಷಣ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಅಂತ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಹಿಂದೂಗಳು ಬಹುಸಂಖ್ಯಾತರಾಗಿರುವ ಕ್ಷೇತ್ರಗಳಿಂದ ಸ್ಪರ್ಧಿಸುವ ಧೈರ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಅಂತ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಹೇಳಿದ್ದರು. ಈ ಹೇಳಿಕೆಯು ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಅಂತ ಆಯೋಗವು ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಜೊತೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದನ್ನು ಉಲ್ಲೇಖಿಸಿ, ದೇಶದ ಬಹುಸಂಖ್ಯಾತ ಸಮುದಾಯದ ಜನರು ಅಲ್ಪಸಂಖ್ಯಾತರಿರುವ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಅಂತ ಮೋದಿ ಹೇಳಿದ್ದರು.ಇದಾದ ಬಳಿಕ ಕಾಂಗ್ರೆಸ್ ಪ್ರಧಾನಿ ಮೋದಿಯವರ ಭಾಷಣದಲ್ಲಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಧ್ವೇಷ ತುಂಬಿದ, ಬಿರುಕು ಮೂಡಿಸುವಂತಹ ಹೇಳಿಕೆಯನ್ನ ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಂತ ಆರೋಪಿಸಿ ಆಯೋಗಕ್ಕೆ ದೂರು ನೀಡಿತ್ತು