ವಾಷಿಂಗ್ಟನ್: ಕೊನೆಗೂ ಭಾರತದ ಒತ್ತಡಕ್ಕೆ ಮಣಿದ ಚೀನಾ ಉಗ್ರ ಮಸೂದ್ ಅಜರ್ ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಆಕ್ಷೇಪಣೆ ಹಿಂಪಡೆದ ಹಿನ್ನಲೆಯಲ್ಲಿ ಇದೀಗ ವಿಶ್ವಸಂಸ್ಧೆಯ ಭದ್ರತಾ ಮಂಡಳಿ ಅಜರ್ ನನ್ನು ಜಾಗತಿಕ ಪಟ್ಟಿಗೆ ಸೇರಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರ ದಾಳಿ ಬಳಿಕ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರನೆಂದು ಘೋಷಿಸಬೇಕು ಎಂದು ವಿಶ್ವಸಂಸ್ಧೆಯ ಭದ್ರತಾ ಮಂಡಳಿಗೆ ಮನವಿ ಮಾಡಿತ್ತು.
ಆದರೆ ಮಸೂದ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಇದೀಗ ಭಾರತದ ಒತ್ತಡಕ್ಕೆ ಮಣಿದ ಚೀನಾ ಆಕ್ಷೇಪ ಹಿಂಪಡೆದಿದೆ.