janadhvani

Kannada Online News Paper

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮೇ.6 ರಂದು ರಂಝಾನ್ ಆರಂಭ

ಮಂಗಳೂರು.ಮೇ 5: ಆದಿತ್ಯವಾರ ರಮದಾನ್ ತಿಂಗಳ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಮೇ.6 ಸೋಮವಾರ ರಮದಾನ್ ಪ್ರಥಮ ದಿನವಾಗಿ ತೀರ್ಮಾನಿಸಲಾಗಿದೆ.

ಮಂಗಳೂರು, ಉಡುಪಿ,ಚಿಕಮಗಳೂರ ಸೇರಿದಂತೆ ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸೋಮವಾರದಿಂದ ಪವಿತ್ರ ರಮಝಾನ್ ತಿಂಗಳ ಉಪವಾಸ ವ್ರತ ಆರಂಭಿಸಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಸಂಯುಕ್ತ ಖಾಝಿಗಳಾದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್ ಬುಖಾರಿ ಹಾಗೂ ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ,ಉಡುಪಿ,ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಖಾಝಿ ತಾಜುಲ್ ಫುಖಹಾಅ ಶೈಖುನಾ ಬೇಕಲ ಇಬ್ರಾಹಿಮ್ ಮುಸ್ಲಿಯಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ರಮದಾನ್ ಪ್ರಥಮ ದಿನವೆಂದು ಕೊಡಗು ಜಿಲ್ಲಾ ಖಾಝಿ ಬಹು: ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಘೋಷಿಸಿದ್ದಾರೆ.

ಬೆಂಗಳೂರು: ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಮಂಗಳವಾರದಿಂದ ಪವಿತ್ರ ರಮಝಾನ್ ಮಾಸದ ಉಪವಾಸ ವ್ರತ ಆಚರಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ರವಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಯಾವುದೇ ಭಾಗದಲ್ಲಿ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜನನ ಹಿರಿಯ ಧಾರ್ಮಿಕ ಮುಖಂಡರು, ಚಂದ್ರ ದರ್ಶನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com