ದುಬೈ: ದುಬೈ ಸರ್ಕಾರದ ಪ್ರಾಯೋಜಕತ್ವದಲ್ಲಿ ಪ್ರತಿ ವರ್ಷ ರಂಝಾನ್ ತಿಂಗಳಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಪವಿತ್ರ ಖುರ್ಆನ್ ಸ್ಪರ್ಧೆ ಹಾಗೂ ಅವಾರ್ಡ್ ದಾನದ ಅಂಗವಾಗಿ ನಡೆಯುವ ಉಪನ್ಯಾಸ ಕಾರ್ಯಕ್ರಮದಲ್ಲಿ ಈ ಬಾರಿಯ ಮುಖ್ಯ ಭಾಷಣಕಾರರಾಗಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಆಹ್ವಾನಿತರಾಗಿದ್ದಾರೆ.
ಮೇ ಹತ್ತರಂದು ಶುಕ್ರವಾರ ತರಾವೀಹ್ ನಮಾಝ್ ಬಳಿಕ ದುಬೈ ಊದ್ ಮೇತ ಅಲ್ ವಾಸಲ್ ಅಂತಾರಾಷ್ಟ್ರೀಯ ಸಭಾಂಗಣದಲ್ಲಿ ನಡೆಯುವ ಸದ್ರಿ ಕಾರ್ಯಕ್ರಮದಲ್ಲಿ
“ಸಹಿಷ್ಣುತೆಯ ಸೌಂದರ್ಯ” ಎಂಬ ವಿಷಯದಲ್ಲಿ ಅವರು ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಭಾಷಣ ಮಾಡಲಿದ್ದಾರೆ. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಶೈಖುನಾ ಎ.ಪಿ.ಮುಹಮ್ಮದ್ ಮುಸ್ಲಿಯಾರ್ ಕಾಂತಪುರಂ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ದುಬೈ ಸರ್ಕಾರದ ನೋಂದಣಿ ಹೊಂದಿರುವ ಮರ್ಕಝು ಸ್ಸಖಾಫತಿ ಸ್ಸುನ್ನಿಯ್ಯಃ ಈ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದು,
ಕಾರ್ಯಕ್ರಮದಲ್ಲಿ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದ್ ಅವರನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಗೌರವಿಸಲಾಗುವುದು. ಯು.ಎ.ಇ.ಸರಕಾರದ ಪ್ರತಿನಿಧಿಗಳ ಸಮೇತ ಹಲವು ಗಣ್ಯರು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಹಿಳೆಯರಿಗೆ ಪ್ರತ್ಯೇಕ ಸ್ಥಳ ಸೌಕರ್ಯ ಏರ್ಪಡಿಸಲಾಗಿದ್ದು ದುಬೈ ನಗರದ ವಿವಿಧ ಕಡೆಗಳಿಂದ ಬಸ್ ಸೌಕರ್ಯವಿದೆ
ಕಾರ್ಯಕ್ರಮ ವನ್ನು ಗರಿಷ್ಠ ಪ್ರಮಾಣದಲ್ಲಿ ಯಶಸ್ವಿ ಗೊಳಿಸಲು ಎಲ್ಲ ಸುನ್ನೀ ಕಾರ್ಯಕರ್ತರು ಶ್ರಮಿಸಬೇಕೆಂದು ದುಬೈ ಮರ್ಕಝು ಸ್ಸಖಾಫತಿ ಸ್ಸುನ್ನಿಯ್ಯ ಹಾಗೂ ಕೆಸಿಎಫ್ ಯು.ಎ.ಇ.ಸಮಿತಿ ವಿನಂತಿಸಿಕೊಂಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ