ಬೆಂಗಳೂರು: ಸುಪ್ರೀಂಕೋರ್ಟ್ ಕೂಡ ಚುನಾವಣೆ ಅಕ್ರಮದಲ್ಲಿ ಭಾಗಿಯಾಗಿದೆ. ಅದಕ್ಕಾಗಿಯೇ ಎಲ್ಲ ಇವಿಎಂಗಳಿಗೆ ಸಮನಾಗಿ ವಿವಿಪ್ಯಾಟ್ ಸ್ಲಿಪ್ ನೀಡುವಂತೆ ವಿರೋಧ ಪಕ್ಷಗಳು ಮಾಡಿದ್ದ ಮನವಿಯನ್ನು ತಿರಸ್ಕರಿಸಿದೆ ಎಂದು ಕಾಂಗ್ರೆಸ್ ಮುಖಂಡ ಉದಿತ್ ರಾಜ್ ಹೇಳುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ಪ್ರತಿ ವಿವಿಪ್ಯಾಟ್ ಸ್ಲಿಪ್ ತಾಳೆ ಹಾಕುವ ಕೇಂದ್ರವನ್ನು ಎಲ್ಲೆಡೆ ತೆರೆಯುವಂತೆ ವಿರೋಧ ಪಕ್ಷಗಳು ಆಗ್ರಹ ಮಾಡಿದ್ದವು. ಆದರೆ, ಇದಕ್ಕೆ ಸುಪ್ರೀಂಕೋರ್ಟ್ ಅಸ್ತು ಎನ್ನಲಿಲ್ಲ. ನಾಳೆ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಗೆ ಬೀಳಲಿದೆ. ಫಲಿತಾಂಶ ಪ್ರಕಟಕ್ಕೂ ಒಂದು ದಿನದ ಮುಂಚೆ ಉದೀತ್ ರಾಜ್ ಈ ಹೇಳಿಕ ನೀಡಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬೀ ಆಜಾದ್ ಮಂಗಳವಾರ ಚುನಾವಣಾ ಆಯೋಗದೊಂದಿಗೆ ಸಭೆ ನಡೆಸಿದ್ದರು. ಸಭೆ ನಂತರ ಮಾತನಾಡಿದ ಅವರು, ನಾವು ಚುನಾವಣಾ ಆಯೋಗಕ್ಕೆ ಹೇಳಿದ್ದೇವೆ, ವಿವಿಪ್ಯಾಟ್ ಯಂತ್ರವನ್ನು ಮೊದಲು ಎಣಿಕೆ ಮಾಡಲಿ ಮತ್ತು ಅದರಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದಲ್ಲಿ ಮತ್ತೆ ಮರುಎಣಿಕೆ ಮಾಡಲಿ ಎಂದು ತಿಳಿಸಿದರು.
ಇವಿಎಂಗಳ ಸಾಗಣೆ ಬಗ್ಗೆಯೂ ಪ್ರಶ್ನೆ ಮಾಡಿರುವ ವಿರೋಧ ಪಕ್ಷಗಳು, ಉತ್ತರ ಪ್ರದೇಶದಲ್ಲಿ ರಕ್ಷಣೆ ಇಲ್ಲದೆ ಇವಿಎಂಗಳ ಸಾಗಣೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿವೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ