ನವದೆಹಲಿ: ‘ಚುನಾವಣೆ ಪ್ರಚಾರದ ವೇಳೆ ನಾನು ಸ್ಪಷ್ಟವಾಗಿ ಹೇಳಿದ್ದೆ… ಜನರೇ ಮಾಲೀಕರು ಎಂದು. ಅವರ ಈ ಆದೇಶವನ್ನು ನಾನು ಭಾರತೀಯನಾಗಿ ಗೌರವಿಸುತ್ತೇನೆ,’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಚುನಾವಣೆ ಸೋಲಿನ ಬಳಿಕ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ‘ಈ ದೇಶದಲ್ಲಿ ಜನರೇ ಮಾಲೀಕರು. ಜನ ತೀರ್ಪನ್ನು ಅತ್ಯಂತ ಸ್ಪಷ್ಟವಾಗಿ ನೀಡಿದ್ದಾರೆ. ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ನಾನು ಅಭಿನಂದಿಸುತ್ತೇನೆ,’ ಎಂದರು.
‘ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು ಎಂದು ಜನತೆ ತೀರ್ಮಾನಿಸಿದ್ದಾರೆ. ಅದನ್ನು ನಾನು ಗೌರವಿಸುತ್ತೇನೆ,’ ಎಂದರು.
ಅಮೇಠಿಯಲ್ಲಿನ ಹಿನ್ನಡೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ ಜನರ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ಸ್ಮೃತಿ ಇರಾನಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ,’ ಎಂದರು.
ಇನ್ನು ಸೋಲಿನ ಕುರಿತು ಮಾತನಾಡಿರುವ ಪ್ರಿಯಾಂಕಾ ಗಾಂಧಿ, ‘ ಜನರ ನಿರ್ಧಾರ ಗೌರವಿಸುತ್ತೇವೆ. ನರೇಂದ್ರ ಮೋದಿ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆಗಳು,’ ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ