ಬೆಂಗಳೂರು: ‘ರಾಜ್ಯದಲ್ಲಿ ಜೆಡಿಎಸ್–ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ’ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೆ ಪತನವಾಗುವುದಿಲ್ಲ. ಆದರೆ ವಿಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ. ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ’ ಎಂದು ಹೇಳಿದರು.ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಜನರಿಗೆ ನಿರಾಸೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಮುಂದಿನ ನಾಲ್ಕು ವರ್ಷ ಎಚ್.ಡಿ.ಕುಮಾರಸ್ವಾಮಿ ಅವರೆ ಮುಖ್ಯಮಂತ್ರಿಯಾಗಿರುತ್ತಾರೆ. ಈ ಕುರಿತು ಇಂದು ಬೆಳ್ಳಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.
ಇದೇ ವೇಳೆ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರೂ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಇನ್ನಷ್ಟು ಸುದ್ದಿಗಳು
ವಾಟ್ಸಾಪ್ ಬಳಕೆದಾರರಿಗೆ ಸೌದಿ ಹಣಕಾಸು ಸಚಿವಾಲಯ ಎಚ್ಚರಿಕೆ
ಬಸ್ ನಲ್ಲಿ ಕಿರುಕುಳ: ಯುವತಿಯ ಪೋಸ್ಟ್ ಸಾಮಾಜಿಕ ತಾಣದಲ್ಲಿ ವೈರಲ್
ವಾಟ್ಸ್ಆ್ಯಪ್ ಹೊಸ ಗೌಪ್ಯತೆ ನೀತಿ: ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ
ಖುರ್ಆನ್ ವಿರುದ್ಧ ಮತಿಗೆಟ್ಟ ಹೇಳಿಕೆ ನೀಡಿದ ಸ್ವಾಮೀಜಿ- ಕಠಿಣ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಆಗ್ರಹ
ಝಂಝಂ ಲೇಬಲಿನಲ್ಲಿ ಸಾದಾ ನೀರು ವಿತರಣೆ – ವಿದೇಶೀಯರ ಬಂಧನ
ಅತೃಪ್ತರು ಇಲ್ಲ ಸಲ್ಲದ ಆರೋಪ ಮಾಡಬೇಡಿ, ಕೇಂದ್ರಕ್ಕೆ ದೂರು ನೀಡಿ- ಬಿಎಸ್ ವೈ