ಮಂಗಳೂರು: ಉದ್ಯೋಗ ಅರಸಿ ಏಜೆನ್ಸಿಯೊಂದರ ಮೂಲಕ ಕುವೈತ್‌ಗೆ ತೆರಳಿ, ಅಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಮಂಗಳೂರಿನ 35 ಯುವಕರ ಗುಂಪು ಸಹಾಯಕ್ಕಾಗಿ ಮೊರೆ ಇಡುತ್ತಿರುವ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಜನವರಿ ತಿಂಗಳಿನಲ್ಲಿ ಕುವೈತ್‌ಗೆ ತೆರಳಿದ್ದು, ಐದು ತಿಂಗಳಿನಿಂದ ಸಂಬಳ ನೀಡಿಲ್ಲ. ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ ಎಂದು ವಿಡಿಯೊದಲ್ಲಿ ಯುವಕರು ಅಳಲು ತೋಡಿಕೊಂಡಿದ್ದಾರೆ. ತಮ್ಮಂತೆಯೇ ವಿವಿಧ ರಾಜ್ಯಗಳಿಂದ ಬಂದಿರುವ 200 ಕಾರ್ಮಿಕರು ಸಂಕಷ್ಟದಲ್ಲಿರುವುದಾಗಿ ತಿಳಿಸಿದ್ದಾರೆ.
‘ಮಂಗಳೂರಿನ ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್‍ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮಾಲೀಕ ಪ್ರಸಾದ್ ಶೆಟ್ಟಿ ಎಂಬವರಿಗೆ 65,000 ನೀಡಿ ಜನವರಿ 7ರಂದು ಕುವೈತ್‌ಗೆ ಬಂದಿದ್ದೇವೆ. ಇಲ್ಲಿ ಬಂದ ಬಳಿಕ ಅತಂತ್ರರಾಗಿದ್ದೇವೆ. ಐದು ತಿಂಗಳಿನಿಂದ ಸಂಬಳ ನೀಡಿಲ್ಲ. ಕೆಲಸದ ಸ್ಥಳದಲ್ಲಿ ಊಟದ ವ್ಯವಸ್ಥೆಯನ್ನೂ ರದ್ದುಗೊಳಿಸಿದ್ದಾರೆ. ಊಟಕ್ಕಾಗಿ ನಾವು ಬೇಡುವ ಪರಿಸ್ಥಿತಿ ಬಂದಿದೆ’ ಎಂದು ಗಣೇಶ್ ಎಂಬುವವರು ಹೇಳಿರುವುದು ವಿಡಿಯೊದಲ್ಲಿದೆ.
‘ಕುವೈತ್‌ನ ಕೇಂಬ್ರಿಡ್ಜ್ ಎಂಬ ಕಂಪೆನಿಯಲ್ಲಿ ಉದ್ಯೋಗ ನೀಡುವುದಾಗಿ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆದರೆ, ಬೇರೆ ಕಂಪೆನಿಯಲ್ಲಿ ಕೆಲಸ ನೀಡಿದರು. ಊರಿಗೆ ಮರಳಿದರೆ ಸಾಕು ಎಂಬ ಸ್ಥಿತಿಯಲ್ಲಿದ್ದೇವೆ’ ಎಂದು ಇನ್ನೊಬ್ಬ ಯುವಕ ಹೇಳಿದ್ದಾರೆ.
‘ಸಹಾಯ ಕೇಳಿ ಕುವೈತ್‌ನ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಸಂಪರ್ಕ ಮಾಡಿದೆವು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಈ ವಿಡಿಯೊವನ್ನು ಶಾಸಕ ವೇದವ್ಯಾಸ ಕಾಮತ್ ಅವರಿಗೆ ತಲುಪಿಸಿ. ನಮ್ಮ ನೆರವಿಗೆ ಬನ್ನಿ ಎಂದು ಅವರಲ್ಲಿ ಮನವಿ ಮಾಡುತ್ತೇವೆ. ಮಾಧ್ಯಮದವರು, ರಾಜಕಾರಣಿಗಳು ಮತ್ತು ಶಾಸಕರು ನಮ್ಮ ನೆರವಿಗೆ ಬನ್ನಿ. ದಯವಿಟ್ಟು ನಾವು ವಾಪಸು ಊರಿಗೆ ಬರಲು ನೆರವು ನೀಡಿ’ ಎಂದು ಇವರೆಲ್ಲರೂ ಬೇಡಿಕೊಂಡಿದ್ದಾರೆ.
ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳ 200ಕ್ಕೂ ಹೆಚ್ಚು ಮಂದಿ ಕೆಲಸಕ್ಕಾಗಿ ಬಂದು ಅಲ್ಲಿ ಸಂಕಷ್ಟದಲ್ಲಿದ್ದಾರೆ ಎಂದು ಈ ಯುವಕರು ವಿಡಿಯೊದಲ್ಲಿ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ