ಹೊಸದಿಲ್ಲಿ: ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಪರಾಭವಗೊಂಡ ಹಿನ್ನೆಲೆಯಲ್ಲಿ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕೇಸರಿ ಜರ್ಸಿ ವಿವಾದವನ್ನು ಕೆಣಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಫ್ತಿ, ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ್ದೆ ಕೇಸರಿ ಜರ್ಸಿ ಎಂದಿದ್ದಾರೆ. ‘ನಾನು ಮೂಢ ನಂಬಿಕೆಗಳನ್ನು ನಂಬುತ್ತೇನೆಂದು ಕರೆದರೂ ಪರವಾಗಿಲ್ಲ ಭಾರತದ ಗೆಲುವಿನ ಓಟವನ್ನು ತಡೆದದ್ದೆ ‘ಟೀಂ ಇಂಡಿಯಾ ಧರಿಸಿದ್ದ ಕೇಸರಿ ಸರ್ಜಿ ಎಂದು ಹೇಳಿದ್ದಾರೆ.ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಭಾನುವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ಭಾರತ ವಿರುದ್ಧ 31 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಆತಿಥೇಯ ಇಂಗ್ಲೆಂಡ್ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿದೆ. ಈ ಮೂಲಕ 1992ರ ಬಳಿಕ ಭಾರತ ವಿರುದ್ಧ ವಿಶ್ವಕಪ್‌ನಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.Call me superstitious but I’d say it’s the jersey that ended India’s winning streak in the #ICCWorldCup2019.
— Mehbooba Mufti (@MehboobaMufti) June 30, 2019